More

    ಜಂಗಮ ಸಮಾಜದ ಪ್ರತಿಭೆಗಳಿಗೆ ಪ್ರೋತ್ಸಾಹ ಅವಶ್ಯ

    ಇಂಡಿ: ಜಂಗಮ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಪುರಸಭೆಯಿಂದ ನಿವೇಶನ ಹಾಗೂ ಭವನ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ 11ಲಕ್ಷ ರೂ. ನೀಡುವುದಾಗಿ ಶಾಸಕ ಯಶವಂತ್ರಾಯಗೌಡ ಪಾಟೀಲ ಭರವಸೆ ನೀಡಿದರು.

    ಪಟ್ಟಣದ ಶಾಂತೇಶ್ವರ ದೇವಸ್ಥಾನ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಜಂಗಮ ಸಮಾಜದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಂಗಮ ಸಮಾಜದಲ್ಲಿ ಸಾಕಷ್ಟು ಜನ ಕಡು ಬಡವರಿದ್ದಾರೆ. ಅನಕ್ಷರಸ್ಥರೂ ಇದ್ದಾರೆ. ಅವರೆಲ್ಲರನ್ನು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾಡಬೇಕಿದೆ. ಜಂಗಮ ಸಮಾಜದ ಪದಾಧಿಕಾರಿಗಳು, ಕಾರ್ಯ ಪ್ರವೃತ್ತರಾಗಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಇನ್ನಷ್ಟು ಉತ್ತೇಜನಗೊಂಡು ಸಾಧನೆ ಮಾಡಲು ಹುರುಪುಗೊಳ್ಳುತ್ತಾರೆ ಎಂದು ಹೇಳಿದರು.

    ವಿರುಪಾಕ್ಷಯ್ಯ ಶಾಸಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ, ಜೆಡಿಎಸ್ ತಾಲೂಕು ಅಧ್ಯಕ್ಷ ಬಿ.ಡಿ.ಪಾಟೀಲ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ, ಪ್ರಭುಗೌಡ ಪಾಟೀಲ ಮಾತನಾಡಿದರು.

    ತಾಪಂ ಅಧ್ಯಕ್ಷ ಅಣ್ಣಪ್ಪ ಬಿದರಕೋಟಿ, ಶ್ರೀಶೈಲ ಪೂಜಾರಿ, ಸಿದ್ದು ಡಂಗಾ, ಯಮುನಾಜಿ ಸಾಳುಂಕೆ, ದೇವೆಂದ್ರ ಕುಂಬಾರ, ಜಿ.ಎಸ್.ಬಂಕೂರ, ಬಸಯ್ಯ ಹಲಸಂಗಿಮಠ ಉಪಸ್ಥಿತರಿದ್ದರು.

    ಸಂಘದ ನೂತನ ಪದಾಧಿಕಾರಿಗಳನ್ನು ಹಾಗೂ ಗ್ರಾಪಂ ಚುನಾವಣೆಯಲ್ಲಿ ಆಯ್ಕೆಯಾದ ಜಂಗಮ ಸಮಾಜದ ಸದಸ್ಯರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts