25.1 C
Bangalore
Friday, December 6, 2019

ಸ್ವತಂತ್ರ ಆಡಳಿತಕ್ಕೆ ಪಕ್ಷಗಳ ರಣತಂತ್ರ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಆರ್.ಬಿ. ಸಿಂಪಿ
ಇಂಡಿ: ಇಂಡಿ ತಾಲೂಕು ಕೇಂದ್ರದಲ್ಲೀಗ ಚುನಾವಣೆ ಭರಾಟೆ ಜೋರಾಗಿದ್ದು, ಸ್ಥಳೀಯ ಪುರಸಭೆ ಸದಸ್ಯ ಸ್ಥಾನಕ್ಕಾಗಿ ಪ್ರಮುಖ ಪಕ್ಷಗಳ ಟಿಕೆಟ್ ಪಡೆಯಲು ಆಕಾಂಕ್ಷಿಗಳು ಭಾರೀ ಪೈಪೋಟಿ ನಡೆಸಿದ್ದಾರೆ.

ಚುನಾವಣೆ ಅಧಿಸೂಚನೆ ಪ್ರಕಟಗೊಳ್ಳುವ ಮುನ್ನವೇ ಆರಂಭಗೊಂಡಿದ್ದ ತಾಲೀಮು ಇದೀಗ ಮತ್ತಷ್ಟು ಚುರುಕು ಪಡೆದಿದೆ. ಹಾಲಿ ಸದಸ್ಯರು ಮತ್ತೊಂದು ಅವಧಿಗೆ ಅವಕಾಶ ಪಡೆಯಲು ವರಿಷ್ಠರಿಗೆ ದುಂಬಾಲು ಬಿದ್ದಿದ್ದಾರೆ. ಇನ್ನು ಕೆಲವರು ಟಿಕೆಟ್ ಸಿಕ್ಕರೂ-ಸಿಗದಿದ್ದರೂ ಸ್ವತಂತ್ರವಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ದಟ್ಟವಾಗಿವೆ.

ಸ್ವತಂತ್ರ ಆಡಳಿತಕ್ಕೆ ಆದ್ಯತೆ
ಕಳೆದೈದು ವರ್ಷಗಳ ಕಾಲ ಹೊಂದಾಣಿಕೆ ಸೂತ್ರದಡಿ ಅಧಿಕಾರ ಅನುಭವಿಸಿದ ಸದಸ್ಯರು ಈ ಬಾರಿ ಸ್ವತಂತ್ರ ಆಡಳಿತಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದಾರೆ. 2014ರ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿ ಗೊಂದಲದಿಂದಾಗಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿಲ್ಲ. ಬಳಿಕ ಹೆಚ್ಚಿನ ಸಂಖ್ಯಾ ಬಲವಿದ್ದರೂ ಬಿಜೆಪಿಗೆ ಪುರಸಭೆ ಅಧಿಕಾರ ಚುಕ್ಕಾಣಿ ಹಿಡಿಯಲಾಗಲಿಲ್ಲ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಗದ್ದುಗೆ ಅಲಂಕರಿಸಲು ಈಗಿನಿಂದಲೇ ಸಂಘಟನಾತ್ಮಕ ಹೋರಾಟ ನಡೆಸುತ್ತಿದೆ. ಅತಂತ್ರ ಆಡಳಿತದಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಅಲ್ಲದೆ, ಹೊಂದಾಣಿಕೆಯಿಂದಾಗಿ ಅಧಿಕಾರ ಚಲಾಯಿಸಲಾಗದ ಹಿನ್ನೆಲೆ ಈ ಬಾರಿ ಶತಾಯ ಗತಾಯ ಸ್ಪಷ್ಟ ಬಹುಮತದೊಂದಿಗೆ ಆಡಳಿತ ನಡೆಸಬೇಕೆಂಬ ಉಮೇದು ಕಾಂಗ್ರೆಸ್‌ನಲ್ಲೂ ಮನೆ ಮಾಡಿದೆ.

ಮೂರು ಸ್ಥಾನ ಪಡೆದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಜೆಡಿಎಸ್ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಗೆಲ್ಲಿಸಲು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ನ ದೋಸ್ತಿ ಬಿಟ್ಟು ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಇಂಗಿತ ವ್ಯಕ್ತಪಡಿಸಿದೆ.

ಪಕ್ಷಗಳ ಬಲಾಬಲ
2014 ರಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ 8, ಕೆಜೆಪಿ 3, ಜೆಡಿಎಸ್ 3, ಕಾಂಗ್ರೆಸ್ 7, ಪಕ್ಷೇತರ ಇಬ್ಬರು ಸೇರಿ 23 ಸದಸ್ಯರ ಬಲವನ್ನು ಇಂಡಿ ಪುರಸಭೆ ಹೊಂದಿತ್ತು. ಸಂಖ್ಯಾ ಬಲವಿದ್ದರೂ ಬಿಜೆಪಿಗಿಂತ ಅಧಿಕಾರದ ದಟ್ಟಪಾಲು ಸಿಕ್ಕಿದ್ದು ಕಾಂಗ್ರೆಸ್‌ಗೆ. ಬಿಜೆಪಿ-ಕೆಜೆಪಿ ಒಂದಾಗಿ ಪಕ್ಷೇತರರನ್ನು ಬುಟ್ಟಿಗೆ ಹಾಕಿಕೊಂಡಿದ್ದರೆ ಬಿಜೆಪಿ ಸ್ವತಂತ್ರವಾಗಿ ಆಡಳಿತ ನಡೆಸಬಹುದಿತ್ತು. ಆದರೆ, ಆಂತರಿಕ ಹೊಂದಾಣಿಕೆ ಇಲ್ಲಿ ಪಕ್ಷವನ್ನು ಬಲಿ ಕೊಟ್ಟಿದೆ. ಹಾಲಿ ಶಾಸಕ ಯಶವಂತರಾಯಗೌಡ ಪಾಟೀಲರ ರಾಜಕೀಯ ಚಾಣಾಕ್ಷತೆ ಕಾಂಗ್ರೆಸ್‌ಗೆ ಹೆಚ್ಚಿನ ಅಧಿಕಾರ ದೊರಕಿಸಿಕೊಡುವಲ್ಲಿ ಸಫಲವಾಗಿದೆ.

ವಾರ್ಡ್‌ವಾರು ಮೀಸಲಾತಿ ವಿವರ
2019ರ ಚುನಾವಣೆಗೆ 23 ವಾರ್ಡ್‌ಗಳಿಗೆ ಮೀಸಲಾತಿ ಪ್ರಕಟಗೊಂಡಿದೆ. ಆ ಪ್ರಕಾರ ವಾರ್ಡ್ ನಂ.1 ಹಿಂದುಳಿದ ವರ್ಗ ಬಿ, ವಾರ್ಡ್ ನಂ.2 ಸಾಮಾನ್ಯ ಮಹಿಳೆ, ವಾರ್ಡ್ ನಂ.3 ಪ.ಜಾ. ಮಹಿಳೆ, ವಾರ್ಡ್ ನಂ. 4 ಸಾಮಾನ್ಯ ಮಹಿಳೆ, ವಾರ್ಡ್ ನಂ.5 ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ನಂ.6 ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ನಂ. 7 ಪರಿಶಿಷ್ಟ ಪಂಗಡ, ವಾರ್ಡ್ ನಂ.8 ಸಾಮಾನ್ಯ ಮಹಿಳೆ, ವಾರ್ಡ್ ನಂ. 9 ಸಾಮಾನ್ಯ, ವಾರ್ಡ್ ನಂ.10 ಸಾಮಾನ್ಯ ಮಹಿಳೆ, ವಾರ್ಡ್ ನಂ.11 ಸಾಮಾನ್ಯ, ವಾರ್ಡ್ ನಂ.12 ಸಾಮಾನ್ಯ ಮಹಿಳೆ, ವಾರ್ಡ್ ನಂ.13 ಸಾಮಾನ್ಯ, ವಾರ್ಡ್ ನಂ.14 ಸಾಮಾನ್ಯ, ವಾರ್ಡ್ ನಂ. 15 ಹಿಂದುಳಿದ ವರ್ಗ (ಎ), ವಾರ್ಡ್ ನಂ.16 ಸಾಮಾನ್ಯ, ವಾರ್ಡ್ ನಂ. 17 ಸಾಮಾನ್ಯ, ವಾರ್ಡ್ ನಂ. 18 ಪರಿಶಿಷ್ಟ ಜಾತಿ, ವಾರ್ಡ್ ನಂ.19 ಪರಿಶಿಷ್ಟ ಜಾತಿ, ವಾರ್ಡ್ ನಂ.20 ಪರಿಶಿಷ್ಟ ಜಾತಿ, ವಾರ್ಡ್ ನಂ. 21 ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ನಂ.22 ಸಾಮಾನ್ಯ ಮಹಿಳೆ, ವಾರ್ಡ್ ನಂ. 23 ಹಿಂದುಳಿದ ವರ್ಗ( ಎ).

ಎಲ್ಲ 23 ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಪ್ರತಿ ವಾರ್ಡ್‌ನಲ್ಲಿ ಕನಿಷ್ಠ 5-6 ಜನರು ಆಕಾಂಕ್ಷಿಗಳಿದ್ದಾರೆ. ಆಯಾ ಭಾಗದ ಹಿರಿಯರ ಮಾರ್ಗದರ್ಶನ ಹಾಗೂ ಸ್ಥಳೀಯರ ಅಭಿಪ್ರಾಯದ ಮೇರೆಗೆ ಟಿಕೆಟ್ ನೀಡುತ್ತೇವೆ. ಜನ ಪ್ರಜ್ಞಾವಂತರಾಗಿದ್ದು, ದೇಶ ಹಾಗೂ ಪಟ್ಟಣದ ಅಭಿವೃದ್ಧಿ ಹಿತದೃಷ್ಟಿಯಿಂದ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಇದೆ.
ಕಾಸುಗೌಡ ಬಿರಾದಾರ, ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ

ಮೈತ್ರಿ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಹೈಕಮಾಂಡ್ ಹೇಳಿದಂತೆ ಕಾರ್ಯ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂಬ ಬಲವಾದ ನಂಬಿಕೆ ಇದೆ. ಹೀಗಾಗಿ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹೆಚ್ಚಿನ ಆದ್ಯತೆ ನೀಡುತ್ತೇವೆ.
ಇಲಿಯಾಸ ಬೋರಾಮಣಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ

ಈ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಎಲ್ಲ 23 ವಾರ್ಡ್‌ಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಈ ಬಾರಿ ಹೆಚ್ಚಿನ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ. ಪಕ್ಷದ ವರಿಷ್ಠರ ಆದೇಶದ ಮೇರೆಗೆ ಟಿಕೆಟ್ ನೀಡಲಾಗುವುದು.
ಬಿ.ಡಿ. ಪಾಟೀಲ, ಜೆಡಿಎಸ್ ತಾಲೂಕಾಧ್ಯಕ್ಷ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...