ಜಾತಿ ರಾಜಕಾರಣಕ್ಕೆ ತಕ್ಕ ಪಾಠ

ಇಂಡಿ: ದೇಶಾದ್ಯಂತ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಮತದಾರರು ಅತಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಗೆಲ್ಲಿಸಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮುಖಂಡ ದಯಾಸಾಗರ ಪಾಟೀಲ ಹೇಳಿದರು.
ಲೋಕಸಭೆ ಚುನಾವಣೆ ಗೆಲುವು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿಕ್ಸೂಚಿಯಾಗಿದೆ. ಮೇ 29 ರಂದು ನಡೆಯಲಿರುವ ಪುರಸಭೆ ಚುನಾವಣೆಯಲ್ಲಿ 18 ರಿಂದ 20 ಬಿಜೆಪಿ ಅಭ್ಯರ್ಥಿಗಳು ಗೆದ್ದು ಪುರಸಭೆ ಗದ್ದುಗೆ ಹಿಡಿಯುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿ ಲೋಕಸಭೆ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ 46 ಸಾವಿರಕ್ಕಿಂತ ಹೆಚ್ಚಿನ ಮತಗಳನ್ನು ನೀಡಿರುವ ಇಂಡಿ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ತಮ್ಮ ಪಕ್ಷದ ಭದ್ರಕೋಟೆ ಎಂದು ಬೀಗುತ್ತಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ನಾವು ಬಿಜೆಪಿ ಪರವಾಗಿದ್ದೇವೆ ಎಂದು ಮತದಾರರು ಎಚ್ಚರಿಕೆ ನೀಡಿದ್ದಾರೆ ಎಂದರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನೀಲ ಜಮಾದಾರ, ಮುಖಂಡ ಬಿ.ಎಸ್. ಪಾಟೀಲ, ರಾಮಸಿಂಗ್ ಕನ್ನೊಳ್ಳಿ, ಬಾಳು ಮುಳಜಿ, ಧರ್ಮು ಮದರಖಂಡಿ, ಸಂತೋಷ ಬಿರಾದಾರ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *