More

    ಭಾರತ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕ್​ ನಾಯಕನ ಹೇಳಿಕೆ ವೈರಲ್​

    ನವದೆಹಲಿ: ಆರ್ಥಿಕ ಸಂಕಷ್ಟದಿಂದಾಗಿ ತೀವ್ರವಾಗಿ ಕಂಗೆಟ್ಟಿರುವ ಪಾಕಿಸ್ತಾನ ಜಾಗತಿಕ ವೇದಿಕೆಗಳಲ್ಲಿ ತೀವ್ರ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದು, ಅಲ್ಲಿನ ರಾಜಕಾರಣಿಗಳು, ಮಾಜಿ ಕ್ರಿಕೆಟಿಗರು ಹಾಗೂ ಸೇನೆ ಅಧಿಕಾರಿಗಳು ಒಂದಿಲ್ಲೊಂದು ನಾಚಿಕೆಗೇಡಿನ ಕೆಲಸ ಮಾಡಿ ಟ್ರೋಲ್​ ಆಗುತ್ತಿರುವುದು ಹೊಸ ವಿಚಾರವೇನಲ್ಲ. ಇದೀಗ ಇದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಸಂಸತ್ತಿನ ವಿಪಕ್ಷ ನಾಯಕ ಭಾರತದ ಕುರಿತು ನೀಡಿರುವ ಹೇಳಿಕೆ ಎಲ್ಲೆಡೆ ವೈರಲ್​ ಆಗುತ್ತಿದೆ.

    ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಪಾಕಿಸ್ತಾನವು ಪ್ರತಿದಿನ ಒಂದಿಲ್ಲೊಂದು ವಿಚಾರಕ್ಕೆ ಭಾರತವನ್ನು ದೂಷಿಸುತ್ತಿತ್ತು. ಅಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಇತ್ತೀಚಿನ ದಿನಗಳಲ್ಲಿ ಭಅರತದ ಬಗ್ಗೆ ಮೃದು ಧೋರಣೆ ತೋರುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಪಾಕಿಸ್ತಾನ ಸಂಸತ್ತಿನ ವಿಪಕ್ಷ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಮಾಡಿರುವ ಭಾಷಣವೇ ಸಾಕ್ಷಿಯಾಗಿದೆ.

    ಇದನ್ನೂ ಓದಿ: ಸಂಪೂರ್ಣ ಆಘಾತಕಾರಿ; ಕೆಕೆಆರ್​ ಆಟಗಾರನ ನಡೆಗೆ ಸುನೀಲ್​ ಗಾವಸ್ಕರ್ ಕೆಂಡ

    ಇತ್ತೀಚಿನ ವರ್ಷಗಳಲ್ಲಿ ನೋಡುವುದಾದರೆ ಭಾರತವು ಜಾಗತಿಕ ಮಟ್ಟದಲ್ಲಿ ಪ್ರಭಾವಶಾಲಿಯಾಗಿ ಬೆಳೆಯುತ್ತಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು ಆದರೆ, ಇಂದು ಭಾರತವು ಜಾಗತಿಕ ಸೂಪರ್ ಪವರ್ ಆಗುವ ಕನಸು ಕಾಣುತ್ತಿದೆ, ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಮತ್ತು ದಿವಾಳಿತನದ ಅಂಚಿನಲ್ಲಿದ್ದೇವೆ. ಇದಕ್ಕೆಲ್ಲಾ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ.

    ನಮ್ಮ ದೇಶದಲ್ಲಿ ನಿರ್ಧಾರಗಳನ್ನು ಬೇರೆಯವರು ತೆಗೆದುಕೊಳ್ಳುತ್ತಾರೆ ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳು ಜವಾಬ್ದಾರರಾಗಿರುತ್ತಾರೆ . ದಿವಾಳಿತನ ತಪ್ಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದೆ ಎಂದು ಸಂಸತ್ತಿನಲ್ಲಿ ವಿಪಕ್ಷ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಹಲವರು ಇವರ ಹೇಳಿಕೆಯನ್ನು ಉಲ್ಲೇಖಿಸಿ ಭಾರತದ ಸಾಧನೆಯ ಬಗ್ಗೆ ಕಮೆಂಟ್​ ಮಾಡುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts