‘ಇಂಡಿಯಾ’ ಮೈತ್ರಿಕೂಟ ಸಭೆ: ಪ್ರಧಾನಿ ಅಭ್ಯರ್ಥಿ ಯಾರು?

1 Min Read
'ಇಂಡಿಯಾ' ಮೈತ್ರಿಕೂಟ ಸಭೆ: ಪ್ರಧಾನಿ ಅಭ್ಯರ್ಥಿ ಯಾರು?

ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚನೆಯ ಸಾಧ್ಯತೆ ಪರಿಶೀಲಿಸಲು ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸಭೆ ನಡೆಸಿದರು.

ಇದನ್ನೂ ಓದಿ: ಮೋದಿಗೆ ಎನ್​ಡಿಎ ಸರ್ವಾನುಮತದ ಬೆಂಬಲ.. ರಾಷ್ಟ್ರಪತಿ ಭೇಟಿಗೆ ನಾಯಕರು – ಪ್ರಮಾಣ ವಚನ ಸ್ವೀಕರ ದಿನವೂ ಫಿಕ್ಸ್​!

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್, ಜೆಎಎಂ ಶಾಸಕಿ ಕಲ್ಪನಾ ಸೊರೆನ್ ಮತ್ತಿತರರು ಉಪಸ್ಥಿತರಿದ್ದರು.

ಈ ನಡುವೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಸಭೆಗೆ ಗೈರುಹಾಜರಾಗಿದ್ದರು. ಆದರೆ ಉದ್ಧವ್ ಠಾಕ್ರೆ ಪರವಾಗಿ ಸಂಜಯ್ ರಾವುತ್ ಮತ್ತು ಟಿಎಂಸಿ ಪರವಾಗಿ ಅಭಿಷೇಕ್ ಬ್ಯಾನರ್ಜಿ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಗೂ ಮುನ್ನ ಸಂಜಯ್ ರಾವತ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ರಾಹುಲ್ ಗಾಂಧಿ ಪ್ರಧಾನಿ ಹುದ್ದೆ ವಹಿಸಿಕೊಳ್ಳಲು ಒಪ್ಪಿದರೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ‘ಇಂಡಿಯಾ’ ಮೈತ್ರಿಕೂಟದ ಪರವಾಗಿ ಯಾರು ಪ್ರಧಾನಿಯಾಗುತ್ತಾರೆ ಎಂಬ ಬಗ್ಗೆ ಮೈತ್ರಿಕೂಟದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ಮತಗಳಿಕೆ ಪ್ರಮಾಣ ಎಷ್ಟು? ಇಲ್ಲಿದೆ ಮಾಹಿತಿ..

See also  ನೆಟ್ಟಿಗರ ಗಮನಸೆಳೆದ ಬುಲ್​ ರೈಡರ್​: ದೆಹಲಿಯ ರಸ್ತೆಗಳಲ್ಲಿಯೇ ಗೂಳಿ ಸವಾರಿ ಮಾಡಿದ್ದೇಕೆ?
Share This Article