ಪ್ರಸಿದ್ಧ ಕೃಷ್ಣ ದಾಳಿಗೆ ವಿಂಡೀಸ್ ಉಡೀಸ್ ; ಭಾರತಕ್ಕೆ ಒಲಿದ ಏಕದಿನ ಸರಣಿ

ಅಹಮದಾಬಾದ್: ಕರ್ನಾಟಕದ ಯುವ ವೇಗಿ ಪ್ರಸಿದ್ಧಕೃಷ್ಣ (12ಕ್ಕೆ 4) ಮಾರಕ ಬೌಲಿಂಗ್ ದಾಳಿ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡವನ್ನು 44 ರನ್‌ಗಳಿಂದ ಮಣಿಸಿತು. ಈ ಮೂಲಕ ರೋಹಿತ್ ಶರ್ಮ ಸಾರಥ್ಯ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್ ಮಾರ್ಗದರ್ಶನದ ತಂಡ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿತು. ವರ್ಷದಾರಂಭದಲ್ಲೇ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಹಾಗೂ ಏಕದಿನ ಸರಣಿ ಸೋಲಿನಿಂದ ಕಂಗೆಟ್ಟಿದ್ದ ಟೀಮ್ ಇಂಡಿಯಾಗೆ ಈ ಸರಣಿ ಹೊಸ ಉತ್ಸಾಹವನ್ನು ತುಂಬಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭಿಕ ಆಘಾತದ ನಡುವೆ ಕನ್ನಡಿಗ ಕೆಎಲ್ ರಾಹುಲ್ (49 ರನ್, 48 ಎಸೆತ, 4 ಬೌಂಡರಿ, 2 ಸಿಕ್ಸರ್) ಹಾಗೂ ಸೂರ್ಯಕುಮಾರ್ ಯಾದವ್ (64ರನ್, 83 ಎಸೆತ, 5 ಬೌಂಡರಿ) ಆಸರೆಯಿಂದ 9 ವಿಕೆಟ್‌ಗೆ 237 ರನ್ ಪೇರಿಸಿತು. ಪ್ರತಿಯಾಗಿ ವಿಂಡೀಸ್ ತಂಡ ಪ್ರಸಿದ್ಧಕೃಷ್ಣ ಸಾರಥ್ಯದಲ್ಲಿ ಸಂಘಟಿಸಿದ ದಾಳಿಗೆ ನಲುಗಿ46 ಓವರ್‌ಗಳಲ್ಲಿ 193 ರನ್‌ಗಳಿಗೆ ಸರ್ವಪತನ ಕಂಡಿತು.

ಭಾರತ: 9 ವಿಕೆಟ್‌ಗೆ 237 (ಕೆಎಲ್ ರಾಹುಲ್ 49, ಸೂರ್ಯಕುಮಾರ್ ಯಾದವ್ 64, ವಾಷಿಂಗ್ಟನ್ ಸುಂದರ್ 24, ದೀಪಕ್ ಹೂಡಾ 29, ಅಲ್ಜಾರಿ ಜೋಸೆಫ್  36ಕ್ಕೆ 2, ಒಡೆನ್ ಸ್ಮಿತ್ 29ಕ್ಕೆ 2), ವೆಸ್ಟ್ ಇಂಡೀಸ್: 46 ಓವರ್‌ಗಳಲ್ಲಿ 193 (ಶೈ ಹೋಪ್ 27, ಅಕೀಲ ಹೊಸೀನ್ 34, ಒಡೆನ್ ಸ್ಮಿತ್ 24, ಪ್ರಸಿದ್ಧ ಕೃಷ್ಣ 12ಕ್ಕೆ 4, ಶಾರ್ದೂಲ್ ಠಾಕೂರ್ 41ಕ್ಕೆ 2).

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…