21.7 C
Bengaluru
Tuesday, January 21, 2020

ಎರಡನೇ ಟೆಸ್ಟ್​ ಪಂದ್ಯ ಸೋತರೆ ನಾಯಕ ಕೊಹ್ಲಿ ಮಾಡಿದ ಈ ಎಡವಟ್ಟೆ ಕಾರಣ ಎನ್ನಬಹುದಂತೆ!

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಪರ್ತ್​: ಈಗಾಗಲೇ ಮೊದಲ ಟೆಸ್ಟ್​ ಪಂದ್ಯದಲ್ಲಿ ವಿಜಯ ಸಾಧಿಸಿರುವ ಭಾರತ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ, ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಮಾಡಿದ ಒಂದು ತಪ್ಪಿನಿಂದಾಗಿ ಕೊಹ್ಲಿ ಹುಡುಗರು ದೊಡ್ಡ ಬೆಲೆತೆರಬೇಕಾಗುವ ಪರಿಸ್ಥಿತಿ ಎದುರಾಗಿದೆ.

ಎರಡನೇ ಟೆಸ್ಟ್​ಗೂ ಮುನ್ನ ಆಸ್ಟ್ರೇಲಿಯಾ ತಂಡ ಹಾಗೂ ಆಸಿಸ್​ನ ಮಾಜಿ ಆಟಗಾರರು ಪರ್ತ್​ನ ಹೊಸ ಪಿಚ್ ಬಗ್ಗೆ ತುಂಬಾನೇ ಮಾತನಾಡಿದ್ದರು. ಅಲ್ಲದೇ ಪಿಚ್ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆದಿತ್ತು. ಆದರೆ, ಗ್ರೀನ್​ಪಿಚ್​ ಅನ್ನು ಅಧ್ಯಯನ ಮಾಡುವುದರಲ್ಲಿ ನಾಯಕ ಕೊಹ್ಲಿ ಎಡವಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಕೋಚ್ ರವಿಶಾಸ್ತ್ರಿ ಕೂಡ ನಾಯಕನಿಗೆ ಯಶಸ್ಸಿನ ದಾರಿ ತೋರುವಲ್ಲಿ ಎಡವಿದ್ದಾರೆ ಎಂದು ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ.

ಪರ್ತ್​ನ ಹೊಸ ಪಿಚ್ ಮರ್ಮವನ್ನು ಕಾಂಗರೂಗಳು ಚೆನ್ನಾಗೇ ಅರ್ಥ ಮಾಡಿಕೊಂಡಿದ್ದಾರೆ. ಮೊದಲ ಸೋಲಿನಿಂದ ಕೆಂಗಟ್ಟಿರುವ ಆಸಿಸ್​ ಪಡೆ ಟೀಂ ಇಂಡಿಯಾವನ್ನು ಖೆಡ್ಡಾಗೆ ಬೀಳಿಸಲು ಸ್ಪೆಷಲ್ ಪಿಚ್ ರಹಸ್ಯವನ್ನು ಎಲ್ಲೂ ಕೂಡ ಹೊರಹಾಕಿಲ್ಲ.

ಎರಡನೇ ಟೆಸ್ಟ್​ ಪಂದ್ಯದಲ್ಲಿ ಆಸಿಸ್ ತಂಡ ಒಬ್ಬ ಸ್ಪಿನ್ನರ್​ ಅನ್ನು ಕಣಕ್ಕಿಳಿಸಿತ್ತು. ಆದರೆ, ಟೀಂ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಸ್ಪಿನ್ನರ್​ಗಳೇ ಇಲ್ಲ. ಕೊಹ್ಲಿ ಸೇನೆಯ ಪಾರ್ಟ್ ಟೈಮ್ ಸ್ಪಿನ್ನರ್ ಹನುಮ ವಿಹಾರಿ ಪರ್ತ್ ಟೆಸ್ಟ್​ನ ಮೊದಲನೇ ದಿನವೇ 2 ವಿಕೆಟ್ ಪಡೆದು ಪರ್ತ್​ ಪಿಚ್ ಸ್ಪಿನ್​ಗೆ ನೆರವಾಗುತ್ತಿದೆ ಎಂಬುದನ್ನು ತೋರಿಸಿಕೊಟ್ಟರು.

ಪ್ರಾರಂಭದಲ್ಲಿ ಪರ್ತ್ ಪಿಚ್ ವೇಗಿಗಳಿಗೆ ಫ್ರೆಂಡ್ಲಿ ಆಗಿದೆ ಎಂದು ಹೇಳಲಾಗ್ತಿತ್ತು. ಹೀಗಾಗಿಯೇ ಟೀಂ ಇಂಡಿಯಾ ಪ್ರಮುಖ ಸ್ಪಿನ್ನರ್​ಗಳನ್ನು ಬೆಂಚ್​ ಕಾಯಿಸಿ, ವೇಗಿಗಳ ಮೊರೆ ಹೋಗಿದ್ದಾರೆ. ಆದರೆ, ಮಹಮ್ಮದ್​ ಶಮಿ ಎಸೆತ ಎದುರಾಳಿ ಬ್ಯಾಟ್ಸ್​​ಮನ್​ನ ಮೊಣಕಾಲಿನ ಮೇಲೂ ಹೋಗುತ್ತಿರಲಿಲ್ಲ. ಇದು ನಾಯಕ ಹಾಗೂ ಕೋಚ್​ ಯೋಜನೆಯ ಪ್ರಾರಂಭಿಕ ವಿಫಲ ಎಂದು ಹೇಳಲಾಗುತ್ತಿದೆ.

ಕಾಂಗರೂಗಳು ತಮ್ಮ ಪ್ಲ್ಯಾನ್​ ಪ್ರಕಾರ ನಿನ್ನೆ ಸ್ಪಿನ್ನರ್ ನಥಾನ್ ಲಯಾನ್ ಕೈಯಲ್ಲಿ ಬೌಲಿಂಗ್ ಮಾಡಿಸಿದರು. ಒಂದು ವಿಕೆಟ್​ ಪಡೆಯುವಲ್ಲಿ ಲಯಾನ್​ ಯಶಸ್ವಿಯಾಗಿದ್ದರು. ಅಡಿಲೇಡ್ ಟೆಸ್ಟ್​ನ ಸೋಲಿನ ನಂತರ ಕಾಂಗರೂಗಳು ತಮ್ಮ ಪ್ಲ್ಯಾನ್​ ಅನ್ನು ಬದಲಾಯಿಸಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.

ರವೀಂದ್ರ ಜಡೇಜಾ ಅವರನ್ನು ಬೆಂಚ್​ ಕಾಯಿಸುವ ಮೂಲಕ ಭಾರತ ದೊಡ್ಡ ತಪ್ಪು ಮಾಡಿದೆ. ಬರೀ ಬೌಲಿಂಗ್​ ಮಾತ್ರವಲ್ಲ, ನಂ 8ರ ಸ್ಥಾನದಲ್ಲಿ ಆಡುತ್ತಿದ್ದ ಜಡೇಜಾ ಅವರ ಬ್ಯಾಟಿಂಗ್​ ಅವಶ್ಯಕತೆಯಿಂದ ಭಾರತ ವಂಚಿತವಾಗಿದೆ. ಎರಡನೇ ಪಂದ್ಯವನ್ನು ಆಸಿಸ್​ ಗೆಲ್ಲಲಿದೆ ಎಂದು ಮಾಜಿ ಆಟಗಾರ ಮೈಕಲ್​ ವಾನ್​ ಅಭಿಪ್ರಾಯಪಟ್ಟಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...