More

    ವೋಟ್​ ಬ್ಯಾಂಕ್​ ರಾಜಕಾರಣಕ್ಕಾಗಿ I.N.D.I.A ಮೈತ್ರಿಕೂಟ ಸನಾತನ ಧರ್ಮವನ್ನು ಅವಮಾನಿಸಿದೆ: ಅಮಿತ್​ ಷಾ

    ಜೈಪುರ: ಸನಾತನ ಧರ್ಮದ ಕುರಿತು ಹೇಳಿಕೆ ನೀಡುವ ಮೂಲಕ ವಿರೋಧ ಪಕ್ಷದ ನಾಯಕರು ತಮ್ಮ ಹಿಂದೂ ವಿರೋಧಿ ನಡೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ವೋಟ್​ ಬ್ಯಾಂಕ್​ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಇವರು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಇದು ಪ್ರಮುಖ ಉದಾಹರಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಆರೋಪಿಸಿದ್ದಾರೆ.

    ವರ್ಷಾಂತ್ಯದಲ್ಲಿ ವಿಧಾನಸಬೆ ಚುನಾವಣೆ ನಡೆಯಲಿರುವ ರಾಜಸ್ಥಾನದ ಡುಂಗರ್​ಪುರದಲ್ಲಿ ಬಿಜೆಪಿ ಪರಿವರ್ತನಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಮಿತ್​ ಷಾ ತಮಿಳುನಾಡು ಸಚಿವ ಉದಯ್​ನಿಧಿ ಸ್ಟಾಲಿನ್​ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ವಿಪಕ್ಷಗಳ ಒಕ್ಕೂಟ I.N.D.I.A ವಿರುದ್ಧ ಹರಿಹಾಯ್ದಿದ್ದಾರೆ.

    ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡು ಸಿಎಂ ಸೇರಿದಂತೆ ಡಿಎಂಕೆ ಪಕ್ಷದ ನಾಯಕರೆಲ್ಲರೂ ಸರಣಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವೋಟ್​ ಬ್ಯಾಂಕ್​ ರಾಜಕ್ಕಾರಣಕ್ಕಾಗಿ ಸನಾತನ ಧರ್ಮದ ವಿರುದ್ಧ ಮಾತನಾಡುವ ಮೂಲಕ ಇವರು ಅಪಮಾನ ಎಸಗಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡುವವವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.

    Amit Shah

    ಇದನ್ನೂ ಓದಿ: ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಶಿಕ್ಷಕನ ಕತ್ತು ಸೀಳಿ ಕೊಲೆ ಮಾಡಿದ ಅಪ್ರಾಪ್ತ ವಯಸ್ಕ

    ವಿಪಕ್ಷಗಳ ಒಕ್ಕೂಟ I.N.D.I.Aವನ್ನು ಘಮಂಡಿಯಾ ಘಟಬಂಧನ್​​ ಎಂದಿರುವ ಅವರು ವೋಟ್​ ಬ್ಯಾಂಕ್​ ರಾಜಕಾರಣಕ್ಕಾಗಿ ಇವರ ಮೈತ್ರಿ ಯಾವ ಮಟ್ಟಿಗೆ ಹೋಗುತ್ತದೆ ಎಂದರೆ ಸನಾತನ ಧರ್ಮ ಕೂಡ ಇವರ ಪಾಲಿಗೆ ಕೇವಲವಾಗಿ ಬಿಟ್ಟಿದೆ. ವೋಟ್​ ಬ್ಯಾಂಕ್​ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಇವರು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಇದು ಪ್ರಮುಖ ಉದಾಹರಣೆಯಾಗಿದೆ ಎಂದು ಆರೋಪಿಸಿದ್ದಾರೆ.

    ಬಿಜೆಪಿ ಗೆದ್ದರೆ ಸನಾತನ ಧರ್ಮ ಉಳಿಯಲಿದೆ. ಸನಾತನವು ಜನರ ಹೃದಯದಲ್ಲಿ ನೆಲೆಯೂರಿದ್ದು, ಸಂವಿಧಾನದ ಆಧಾರದಲ್ಲಿ ದೇಶ ಮುನ್ನಡೆಯಲಿದೆ ಎಂದು ಕೇಂದ್ರ ಸಚಿವ ಅಮಿತ್​ ಷಾ ವಿಪಕ್ಷಗಳ ಒಕ್ಕೂಟದ ವಿರುದ್ಧ ರಾಜಸ್ಥಾನದ ಡುಂಗರ್​ಪುರದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts