Border Row: ಭಾರತ - ಚೀನಾ ನಡುವೆ ಹೊಸ ಒಪ್ಪಂದ..ಎಲ್​ಎಸಿಯಲ್ಲಿ ಸೇನೆ ಹಿಂಪಡೆದು ಗಸ್ತು ವ್ಯವಸ್ಥೆಗೆ ಅಸ್ತು!

chinaborder
Published on

ನವದೆಹಲಿ: ಭಾರತ ಮತ್ತು ಚೀನಾ ಗಡಿ(Border Row)ಯ ಎಲ್​ಎಸಿ ನಲ್ಲಿ ಗಸ್ತು ತಿರುಗುವ ಬಗ್ಗೆ ಉಭಯ ದೇಶಗಳ ನಡುವೆ ಹೊಸ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ. ಈ ಕುರಿತು ಸೋಮವಾರ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾಗವಹಿಸಲಿರುವ ರಷ್ಯಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ಮುಂಚಿತವಾಗಿ ಈ ಒಪ್ಪಂದವನ್ನು ಮಾಡಲಾಗಿದೆ.

ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದ್ದಾಗಿದೆ. ಸಂಘರ್ಷಕ್ಕೀಡಾಗುತ್ತಿದ್ದ ಈ ಎರಡೂ ಕಡೆ ಡೀಎಂಗೇಜ್‌ಮೆಂಟ್ ಅಂದರೆ ಸೈನ್ಯವನ್ನು ಹಿಂತೆಗೆದುಕೊಂಡು ಗಸ್ತು ತಿರುಗಲು ಮಾತ್ರ ಅವಕಾಶವಿರುತ್ತದೆ ಎಂದು ತಿಳಿಸಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಪ್ರಶ್ನೆಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು, ಕಳೆದ ಹಲವು ವಾರಗಳಿಂದ ಭಾರತ ಮತ್ತು ಚೀನಾ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆಯುತ್ತಿವೆ. ಎಲ್​ಎಸಿ ಸಮಸ್ಯೆ ಕುರಿತು ನಾವು ಚೀನಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಪಡೆಗಳನ್ನು ಹಿಂಪಡೆಯಲು ಮತ್ತು ಪರಿಸ್ಥಿತಿಯನ್ನು ಪರಿಹರಿಸಲು ಗಸ್ತು ವ್ಯವಸ್ಥೆಯನ್ನು ಮಾಡಲಾಗಿದೆ. ದ್ವಿಪಕ್ಷೀಯ ವಿಷಯದ ಬಗ್ಗೆ, ನಾವು ಇನ್ನೂ ಸಮಯ ಮತ್ತು ಬದ್ಧತೆಗಳ ಪ್ರಕಾರ ಕೆಲಸ ಮಾಡುತ್ತಿದ್ದೇವೆ ಎಂದರು.

ಗಸ್ತು ವ್ಯವಸ್ಥೆಗೆ ಒಪ್ಪಿಗೆ ನೀಡಿರುವುದರಿಂದ ಸೈನ್ಯವನ್ನು ಹಿಂತೆಗೆದುಕೊಳ್ಳಲು ಅನುಕೂಲವಾಗುತ್ತದೆ. 2020 ರಲ್ಲಿ ಪೂರ್ವ ಲಡಾಖ್‌ನಲ್ಲಿ ಚೀನಾ ಸೇನೆಯ ಕ್ರಮದ ನಂತರ ಉದ್ಭವಿಸಿದ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net