26.8 C
Bangalore
Friday, December 13, 2019

ತವರಲ್ಲಿ ಮುಂದುವರಿದ ಟೀಂ ಇಂಡಿಯಾ ಪ್ರಾಬಲ್ಯ: ಬಾಂಗ್ಲಾದೇಶದ ವಿರುದ್ಧ ಇನಿಂಗ್ಸ್​ ಹಾಗೂ 130 ರನ್​ಗಳ ಜಯ

Latest News

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಅಧ್ಯಕ್ಷ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಇಂದೋರ್​: ತವರಿನಲ್ಲಿ ವಿರಾಟ್​ ಕೊಹ್ಲಿ ನೇತೃತ್ವದ ಟೀಂ ಇಂಡಿಯಾದ ಪ್ರಾಬಲ್ಯ ಮುಂದುವರಿದಿದೆ. ಇಂದೋರ್​ನ ಹೋಲ್ಕರ್​ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ಇನಿಂಗ್ಸ್​ ಹಾಗೂ 130 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ತನ್ಮೂಲಕ 2 ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕರ್ನಾಟಕ ತಂಡದ ಆಟಗಾರ ಮಯಾಂಕ್​ ಅಗರ್​ವಾಲ್​ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ದ್ವಿಶತಕ ದಾಖಲಿಸಿ ಪ್ರವಾಸಿ ಬಾಂಗ್ಲಾ ವಿರುದ್ಧ ಭಾರಿ ಮುನ್ನಡೆ ಗಳಿಸಿಕೊಳ್ಳಲು ವಿರಾಟ್​ ಕೊಹ್ಲಿ ಬಳಗಕ್ಕೆ ನೆರವಾಗಿದ್ದರು. ಇದರ ಸಂಪೂರ್ಣ ಲಾಭ ಪಡೆದ ಬೌಲರ್​ಗಳು ಮೂರು ದಿನಗಳ ಅಂತರದಲ್ಲಿ ಪ್ರವಾಸಿ ತಂಡವನ್ನು ಎರಡು ಬಾರಿ ಆಲೌಟ್​ ಮಾಡಿ ತಂಡಕ್ಕೆ ಮೇಲುಗೈ ಒದಗಿಸಿಕೊಡುವಲ್ಲಿ ಯಶಸ್ವಿಯಾದರು.

ಮೊದಲ ಇನಿಂಗ್ಸ್​ನಲ್ಲಿ 343 ರನ್​ಗಳ ಭಾರಿ ಮುನ್ನಡೆಯೊಂದಿಗೆ ಭಾರತ ಇನಿಂಗ್ಸ್​ ಡಿಕ್ಲೇರ್​ ಮಾಡಿಕೊಂಡಿತು. ಭಾರತೀಯ ಬೌಲರ್​ಗಳ ದಾಳಿಯನ್ನು ಎದುರಿಸಲಾಗದೆ ಮೊದಲ ಇನಿಂಗ್ಸ್​ನಲ್ಲಿ 150 ರನ್​ ಗಳಿಸಲಷ್ಟೇ ಶಕ್ತರಾಗಿದ್ದ ಬಾಂಗ್ಲಾ ಬ್ಯಾಟ್ಸ್​ಮನ್​ಗಳು ಎರಡನೇ ಇನಿಂಗ್ಸ್​ನಲ್ಲೂ ಕಳಪೆ ಪ್ರದರ್ಶನ ಮುಂದುವರಿಸಿದರು.

ಮೂರನೇ ದಿನದಾಟದ ಭೋಜನ ವಿರಾಮದ ವೇಳೆಗೆ 60 ರನ್​ಗಳಿಗೆ 4 ವಿಕೆಟ್​ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಮುಷ್​ಫಿಕರ್​ ರಹೀಂ (64) ಏಕಾಂಗಿ ಹೋರಾಟ ನಡೆಸಿದರು. ಇನ್ನೊಂದು ಬದಿಯಿಂದ ಸೂಕ್ತ ಬೆಂಬಲ ದೊರೆಯದ ಕಾರಣ ತಂಡದ ಹೀನಾಯ ಸೋಲನ್ನು ತಪ್ಪಿಸಲು ಅವರಿಗೆ ಸಾಧ್ಯವಾಗದೇ ಹೋಯಿತು.

ಅಹಿರ್ನಿಶಿ ಟೆಸ್ಟ್​: ಭಾರತ ಮತ್ತು ಬಾಂಗ್ಲಾದೇಶ ಕೋಲ್ಕತದ ಈಡನ್​ ಗಾರ್ಡನ್ಸ್​ನಲ್ಲಿ ಅಹಿರ್ನಿಶಿ ಟೆಸ್ಟ್​ ಪಂದ್ಯವನ್ನು ಆಡಲಿವೆ. ಭಾರತ ಮತ್ತು ಬಾಂಗ್ಲಾದೇಶದ ಪಾಲಿಗೆ ಇದು ಮೊದಲ ಡೇ ಆ್ಯಂಡ್​ ನೈಟ್​ ಟೆಸ್ಟ್​ ಮ್ಯಾಚ್​ ಆಗಿದೆ.

ಸಂಕ್ಷಿಪ್ತ ಸ್ಕೋರ್​: ಬಾಂಗ್ಲಾದೇಶ 150 ಮತ್ತು 213 (ಮುಶ್ಫಿಕರ್​ ರಹೀಂ 64, ಮಹೆದಿ ಹಸನ್​ 38, ಮೊಹಮ್ಮದ್​ ಶಮಿ 31ಕ್ಕೆ 4, ರವಿಚಂದ್ರನ್​ ಅಶ್ವಿನ್​ 42ಕ್ಕೆ 3, ಉಮೇಶ್​ ಯಾದವ್​ 51ಕ್ಕೆ 2)
ಭಾರತ: 6ಕ್ಕೆ 493 ಡಿಕ್ಲೇರ್​ (ರವೀಂದ್ರ ಜಡೇಜಾ 60*, ಉಮೇಶ್​ ಯಾದವ್​ 25*, ಅಬು ಜಯೇದ್​ 108ಕ್ಕೆ 4)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....