18.5 C
Bangalore
Monday, December 16, 2019

ಕಾಶ್ಮೀರ ವಿವಾದ ಇತ್ಯರ್ಥಕ್ಕಾಗಿ ಮಧ್ಯಸ್ಥಿಕೆ ವಹಿಸುವಂತೆ ಭಾರತ ಮನವಿ ಮಾಡಿಕೊಂಡಿಲ್ಲ ಎಂದು ಅಮೆರಿಕದ ಸ್ಪಷ್ಟನೆ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ವಾಷಿಂಗ್ಟನ್​: ಪಾಕಿಸ್ತಾನದೊಂದಿಗಿನ ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಲು ಮಧ್ಯಸ್ಥಿಕೆ ವಹಿಸುವಂತೆ ಅಮೆರಿಕವನ್ನು ಭಾರತ ಕೋರಿಕೊಂಡಿಲ್ಲ. ಬದಲಿಗೆ ಭಾರತ ಮತ್ತು ಪಾಕಿಸ್ತಾನದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಇಮ್ರಾನ್​ ಖಾನ್​ ನಡುವೆ ಉತ್ತಮ ಬಾಂಧವ್ಯ ಇರುವ ಕಾರಣ, ಆ ಎರಡು ರಾಷ್ಟ್ರಗಳು ಬಯಸಿದರೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಫ್ರಾನ್ಸ್​ನಲ್ಲಿ ನಡೆಯುತ್ತಿರುವ ಜಿ7 ಶೃಂಗ ಸಭೆಯ ಸಂದರ್ಭದಲ್ಲೂ ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಜಿ7 ಶೃಂಗದ ಹಿನ್ನೆಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ನಿಶ್ಚಿತವಾಗಿ ಕಾಶ್ಮೀರದ ವಿಷಯ ಪ್ರಸ್ತಾಪವಾಗುತ್ತದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ವಿಶೇಷ ಅಧಿಕಾರ ನೀಡುವ ಭಾರತೀಯ ಸಂವಿಧಾನದ 370 ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವುದು ಭಾರತದ ಆಂತರಿಕ ವಿಷಯ ಎಂಬುದು ನಿಜ. ಆದರೆ, ಈ ನಿರ್ಧಾರ ಪ್ರಾದೇಶಿಕವಾಗಿ ಭಾರಿ ಪರಿಣಾಮವನ್ನುಂಟು ಮಾಡುತ್ತದೆ. ಹಾಗಾಗಿ ಈ ಪ್ರದೇಶದಲ್ಲಿ ಮೂಡಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಟ್ರಂಪ್​ ಅವರು ಮೋದಿ ಜತೆ ಚರ್ಚಿಸಲಿದ್ದಾರೆ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...