More

    ಚೆನ್ನೈ ಟೆಸ್ಟ್ ಪಂದ್ಯಗಳಿಗೆ ಪ್ರೇಕ್ಷಕರಿಗಿಲ್ಲ ಪ್ರವೇಶ..!

    ಚೆನ್ನೈ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆರಂಭಿಕ ಎರಡು ಟೆಸ್ಟ್ ಪಂದ್ಯಗಳು ಖಾಲಿ ಸ್ಟೇಡಿಯಂನಲ್ಲಿ ನಡೆಯಲಿವೆ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಪ್ರಕಟಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮಾರ್ಗಸೂಚಿಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರೊನಾ ವೈರಸ್ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೊದಲೇ ಬಿಸಿಸಿಐ ಎಸ್‌ಒಪಿ ಸಿದ್ಧಪಡಿಸಿತ್ತು. ಬಿಸಿಸಿಐ ಮಾರ್ಗಸೂಚಿಯಂತೆ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅನುಮತಿ ನೀಡಲಾಗುತ್ತಿಲ್ಲ ಎಂದು ಟಿಎನ್‌ಸಿಎ ಕಾರ್ಯದರ್ಶಿ ಆರ್.ಎಸ್ ರಾಮಸ್ವಾಮಿ ತಿಳಿಸಿದ್ದಾರೆ. ಫೆ.5 ರಿಂದ ಮೊದಲ ಹಾಗೂ ಫೆ.13 ರಿಂದ ಎರಡನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ.

    ಇದನ್ನೂ ಓದಿ:ಶ್ರೀಲಂಕಾ ತಂಡಕ್ಕೆ ಏಂಜಲೋ ಮ್ಯಾಥ್ಯೂಸ್ ಶತಕದಾಸರೆ,

    ದೇಶದ ಆರು ನಗರಗಳಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಲೀಗ್ ಹಂತದ ಪಂದ್ಯಗಳಿಗೂ ಪ್ರೇಕ್ಷಕರು ಹಾಗು ಮಾಧ್ಯಮದವರಿಗೆ ಪ್ರವೇಶವಿರಲಿಲ್ಲ.ಇದೀಗ ಅಂತಾರಾಷ್ಟ್ರೀಯ ಪಂದ್ಯಕ್ಕೂ ಪ್ರೇಕ್ಷಕರಿಗೆ ಅವಕಾಶ ನಿರಾಕರಿಸಲಾಗಿದೆ. ಕರೊನಾ ವೈರಸ್ ಭೀತಿಯಿಂದಾಗಿ ಕಳೆದ ಭಾರತದಲ್ಲಿ ಕಳೆದ 10 ತಿಂಗಳಿಂದ ಕ್ರಿಕೆಟ್ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. ಇದೀಗ ಕರೊನಾ ಕಾಲದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿಪಕ್ಷೀಯ ಸರಣಿ ಆರಂಭಗೊಳ್ಳಲಿದೆ. ಇದೇ ತಿಂಗಳು ಆರಂಭಗೊಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಗೂ ಪ್ರೇಕ್ಷಕರಿಗೆ ಅನುಮತಿ ನೀಡಲಾಗಿತ್ತು. ಜ.26 ರಿಂದ 31 ರವರೆಗೆ ನಡೆಯಲಿರುವ ನಾಕೌಟ್ ಹಂತದ ಪಂದ್ಯಗಳು ನಡೆಯಲಿವೆ. ಜನವರಿ 20 ರಂದು ಟಿಎನ್‌ಸಿಎ ಪತ್ರ ಬರೆದಿರುವ ಬಿಸಿಸಿಐ ಪ್ರೇಕ್ಷಕರಿಗೆ ಅನುಮತಿ ನಿರಾಕರಿಸಿದೆ.

    ಉಭಯ ತಂಡಗಳು ಜನವರಿ 27 ರಂದು ಚೆನ್ನೈ ಆಗಮಿಸಲಿದ್ದು, ಬಯೋ ಬಬಲ್ ಪ್ರದೇಶಕ್ಕೆ ಪ್ರವೇಶ ಪಡೆಯುವ ಮೊದಲು ಕೋವಿಡ್-19 ಪರೀಕ್ಷೆಗೆ ಒಳಗಾಗಲಿವೆ. ಶೇಕಡ 50 ರಷ್ಟು ಪ್ರೇಕ್ಷಕರೊಂದಿಗೆ ಕ್ರೀಡಾಕೂಟ ಆಯೋಜಿಸಬಹುದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿತ್ತು. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಬಿಸಿಸಿಐ ಪ್ರೇಕ್ಷಕರಿಗೆ ಅನುಮತಿ ನಿರಾಕರಿಸಿದೆ.

    ಅದ್ದೂರಿ ಸ್ವಾಗತದ ಬಳಿಕ ಅಜಿಂಕ್ಯ ರಹಾನೆ ಕೇಕ್ ಕತ್ತರಿಸಲು ನಿರಾಕರಿಸಿದ್ದು ಯಾಕೆ ಗೊತ್ತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts