ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಣೆ; ಬಾಂಗ್ಲಾದ ಹಸ್ತಾಂತರ ಬೇಡಿಕೆ ಬೆನ್ನಲ್ಲೆ ಭಾರತದ ಮಹತ್ತರ ನಿರ್ಧಾರ | Sheikh Hasina

Untitled design - 2025-01-08T164406.094
Published on

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina) ಅವರ ವೀಸಾ ಅವಧಿಯನ್ನು ಭಾರತ ಸರ್ಕಾರ ವಿಸ್ತರಿಸಿದೆ. ಆದರೆ ಅವರ ಪಾಸ್‌ಪೋರ್ಟ್ ರದ್ದುಗೊಳಿಸಲಾಗಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ಹಸ್ತಾಂತರಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

ಬಾಂಗ್ಲಾದೇಶದ ಹಂಗಾಮಿ ಸರ್ಕಾರ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದೆ. ಇದಲ್ಲದೇ ಇತರೆ 96 ಜನರ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಲಾಗಿದೆ. ಜುಲೈನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಜನರ ನಾಪತ್ತೆ ಮತ್ತು ಕೊಲೆಯ ಆರೋಪ ಅವರ ಮೇಲಿದೆ. ಹಸೀನಾ ಅವರ ಹಸ್ತಾಂತರ ಮತ್ತು ವಿಚಾರಣೆಯನ್ನು ಹಂಗಾಮಿ ಸರ್ಕಾರ ದೊಡ್ಡ ವಿಷಯವಾಗಿ ಮಾಡುತ್ತಿದೆ. ಶೇಖ್ ಹಸೀನಾ ಕಳೆದ ವರ್ಷ ಆಗಸ್ಟ್‌ನಿಂದ ಭಾರತದಲ್ಲಿ ನೆಲೆಸಿದ್ದಾರೆ. ಆಕೆಯ ಹಸ್ತಾಂತರಕ್ಕೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಬೇಡಿಕೆ ಹೆಚ್ಚುತ್ತಿರುವ ಸಮಯದಲ್ಲಿ ಭಾರತ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಇದರು ಬಾಂಗ್ಲಾಕ್ಕೆ ನೀಡಿರುವ ತಕ್ಕ ಉತ್ತರವಾಗಿದೆ.

ಆಗಸ್ಟ್ 5 ರಂದು ಹಿಂಸಾತ್ಮಕ ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ ಢಾಕಾದಿಂದ ಪಲಾಯನ ಮಾಡಿದ ಹಸೀನಾಗೆ ಆಶ್ರಯ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ ಆಶ್ರಯ ನೀಡಲು ಯಾವುದೇ ನಿರ್ದಿಷ್ಟ ಕಾನೂನು ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅವರ ವೀಸಾ ವಿಸ್ತರಣೆಯನ್ನು ಆಶ್ರಯ ನೀಡುವತ್ತ ಒಂದು ಹೆಜ್ಜೆ ಎಂದು ಪರಿಗಣಿಸಬಾರದು ಎಂದು ಹೇಳಿದರು.

ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಇತ್ತೀಚೆಗೆ ಭಾರತ ಸರ್ಕಾರಕ್ಕೆ ರಾಜತಾಂತ್ರಿಕ ಟಿಪ್ಪಣಿಯನ್ನು ಕಳುಹಿಸಿದ್ದು, ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಒತ್ತಾಯಿಸಿದೆ. ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಡಿಸೆಂಬರ್ 23 ರಂದು ಔಪಚಾರಿಕವಾಗಿ ಶೇಖ್ ಹಸೀನಾಳನ್ನು ಹಸ್ತಾಂತರಿಸುವಂತೆ ಕೋರಿತು. 2024ರ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ಮತ್ತು ನಾಪತ್ತೆಗಳ ಘಟನೆಗಳಲ್ಲಿ ಹಸೀನಾ ಭಾಗಿಯಾಗಿರುವ ಆರೋಪವನ್ನು ಎದುರಿಸಬೇಕಾಗುತ್ತದೆ ಎಂದು ಢಾಕಾ ಅಧಿಕಾರಿಗಳು ಹೇಳಿದ್ದಾರೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net