ಪ್ಯಾರಿಸ್​ ಪ್ಯಾರಾಲಿಂಪಿಕ್ಸ್​​​​; ಜಾವೆಲಿನ್​ ಥ್ರೋನಲ್ಲಿ ಸ್ವರ್ಣ ಪದಕಕ್ಕೆ ಮುತ್ತಿಟ್ಟ ನವದೀಪ್​ ಸಿಂಗ್​

Navdeep Singh

ಪ್ಯಾರಿಸ್​: ಪ್ಯಾರಿಸ್​ ಆತಿಥ್ಯದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್​ನಲ್ಲಿ  ಭಾರತದ  ಜಾವೆಲಿನ್ ಥ್ರೋ ತಾರೆ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ.

ಪುರುಷರ ವಿಭಾಗದಲ್ಲಿ 47.32 ಮೀಟರ್‌ ದೂರಕ್ಕೆ ಜಾವೆಲಿನ್​ ಎಸೆಯುವ ಮೂಲಕ ನವದೀಪ್ ಪ್ಯಾರಾಲಿಂಪಿಕ್ಸ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 2021ರಲ್ಲಿ ನಡೆದ ಟೋಕಿಯೋ ಪ್ಯಾರಾಲಿಂಪಿಕ್ಸ್​ನಲ್ಲಿ ಪ್ಯಾರಾಲಿಂಪಿಕ್ಸ್​ನಲ್ಲಿ ಚೀನಾದ ಪೆಂಗ್‌ಕ್ಸಿಯಾಂಗ್ ಸನ್ 47.13m ದೂರಕ್ಕೆ ಜಾವೆಲಿನ್ ಎಸೆದಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ನವದೀಪ್ ಸಿಂಗ್ 47,32 ಮೀಟರ್ ದೂರಕ್ಕೆ ಎಸೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಟೋಕಿಯೊ ಗೇಮ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಹರಿಯಾಣದ 23 ವರ್ಷದ ಪ್ಯಾರಾ-ಅಥ್ಲೀಟ್ ನವದೀಪ್ ಸಿಂಗ್, ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ 47.32 ಮೀಟರ್ಸ್ ದೂರ ಥ್ರೋ ಸಾಧನೆ ಮಾಡುವ ಮೂಲಕ ದಾಖಲೆಯೊಂದಿಗೆ ಚಿನ್ನ ಗೆದ್ದರು. ಪುರುಷರ ಜಾವೆಲಿನ್ ಎಫ್41 ವಿಭಾಗದಲ್ಲಿ ಭಾರತ ಗೆದ್ದ ಮೊದಲ ಚಿನ್ನದ ಪದಕ ಇದಾಗಿದೆ.

ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡ ಕುಸಿತ; 8 ಮಂದಿ ಸಾವು, 25ಕ್ಕೂ ಅಧಿಕ ಜನರ ಸ್ಥಿತಿ ಗಂಭೀರ

ಪುರುಷರ ಎಫ್‌ 41 ವಿಭಾಗದ ಫೈನಲ್‌ನಲ್ಲಿ ಜಾವಿಲಿನ್ ಥ್ರೋದಲ್ಲಿ ನವದೀಪ್‌ ಅಮೋಘ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಆದರೆ, ಆಕ್ಷೇಪಾರ್ಹ ಧ್ವಜವನ್ನು ಪದೇ ಪದೇ ಪ್ರದರ್ಶಿಸಿದ ಕಾರಣ ಚಿನ್ನದ ಪದಕ ವಿಜೇತ ಇರಾನ್‌ನ ಸಾಡೆಗ್ ಬೀತ್ ಸಯಾಹ್ ಅವರನ್ನು ಅನರ್ಹಗೊಳಿಸಲಾಯಿತು. ಅಂತಿಮವಾಗಿ ನವದೀಪ್ ಸಿಂಗ್‌ಗೆ ಬೆಳ್ಳಿ ಬದಲು ಚಿನ್ನದ ಪದಕ ನೀಡಲು ನಿರ್ಧರಿಸಲಾಯಿತು.

ಇದರೊಂದಿಗೆ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಸರ್ವಶ್ರೇಷ್ಠ ಪ್ರದರ್ಶನ ನೀಡಿರುವ ಭಾರತೀಯ ಸ್ಪರ್ಧಿಗಳು ಈವರೆಗೆ ಒಟ್ಟು 29 ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚಿನ ಪದಕಗಳು ಒಳಗೊಂಡಿದ್ದು, ಭಾರತವು 16ನೇ ಸ್ಥಾನ ಕಾಯ್ದುಕೊಂಡಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಐದು ಚಿನ್ನ ಸೇರಿದಂತೆ ಭಾರತ ಒಟ್ಟು 19 ಪದಕಗಳನ್ನು ಗೆದ್ದಿತ್ತು.

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…