

America: ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ನನಗೆ ಭರವಸೆ ನೀಡಿದ್ದಾರೆ ಎಂಬ ತಮ್ಮ ಮಾತನ್ನು ಮತ್ತೊಮ್ಮೆ ಪುನರುಚ್ಚರಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump), ಈಗಾಗಲೇ ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಹೆಚ್ಚು ಕಡಿಮೆ ನಿಲ್ಲಿಸಿದೆ ಎಂದು ಶುಕ್ರವಾರ (ಅ. 17) ಹೇಳಿದ್ದಾರೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ, ಅವರು ಈಗಾಗಲೇ ತೈಲ ಬೆಲೆ ಏರಿಕೆಯನ್ನು ಕಡಿಮೆ ಮಾಡಿದ್ದಾರೆ, ಮತ್ತು ಅವರು ಹೆಚ್ಚು ಕಡಿಮೆ ನಿಲ್ಲಿಸಿದ್ದಾರೆ. ಖರೀದಿಯಿಂದ ಹಿಂದೆ ಸರಿಯುತ್ತಿದ್ದಾರೆ. ಸುಮಾರು ಶೇಕಡಾ 38 ರಷ್ಟು ತೈಲವನ್ನು ಖರೀದಿಸಿದ್ದಾರೆ. ಇನ್ಮುಂದೆ ಖರೀದಿಸಲ್ಲ ಎಂದು ಹೇಳಿದ್ದಾರೆ.
ರಷ್ಯಾದಿಂದ ತೈಲ ಖರೀದಿಸಿ ನಿಲ್ಲಿಸುವುದಾಗಿ ಪ್ರಧಾನಿ ಮೋದಿ ನನಗೆ ಭರವಸೆ ನೀಡಿದ್ದಾರೆ ಹೇಳಿಕೆಗೆ ಗುರವಾರ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಭಾರತ ಸರ್ಕಾರವು ತನ್ನ ಶಕ್ತಿ ಮೂಲಗಳನ್ನು ಬ್ರಾಡ್-ಬೇಸಿಂಗ್ ಮತ್ತು ವೈವಿಧ್ಯೀಕರಣ ಮೂಲಕ ಮಾರುಕಟ್ಟೆ ಸ್ಥಿತಿಗಳಿಗೆ ಸರಿಹೊಂದಿಸುತ್ತಿದೆ ಎಂದು ಸ್ಪಷ್ಟಪಡಿಸಿದೆ ಎಂದು ಹೇಳಿದೆ.
ಇನ್ನು ರಷ್ಯಾ ಕಚ್ಚಾ ತೈಲವನ್ನು ಖರೀದಿಸುವ ಮೂಲಕ ಭಾರತವು ಪುಟಿನ್ ಅವರಿಗೆ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ ಎಂಬ ಅಮೆರಿಕಾ ಆರೋಪವನ್ನು ಭಾರತ ತಿರಸ್ಕರಿಸಿದ್ದು, ತನ್ನ ಇಂಧನ ಖರೀದಿ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದೆ. ಈ ಹಿನ್ನೆಲೆ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕವನ್ನು ವಿಧಿಸಿದೆ. ಭಾರತ ಇದನ್ನು ಅನ್ಯಾಯ, ನ್ಯಾಯಸಮ್ಮತವಲ್ಲದ ಕ್ರಮ ಎಂದು ಕರೆದಿದೆ. (ಏಜೆನ್ಸೀಸ್)