

ಕುಂದಾಪುರ: ಮೋದಿ ದೇಶದಲ್ಲಿ ಅಭಿವೃದ್ಧಿಯ ಕ್ರಾಂತಿ ವಾಡಿದ್ದು, ಆಡಳಿತದಲ್ಲಿ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತವು ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆ ಬಿಜೆಪಿ ವತಿಯಿಂದ ದೇಶಾದ್ಯಂತ ಸೆ.17 ರಿಂದ ಅ.2ರವರೆಗೆ ಸೇವಾ ಪಾಕ್ಷಿಕ ಅಭಿಯಾನದ ಮೂಲಕ ವಿಶಿಷ್ಟವಾಗಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕುಂದಾಪುರ ಟಕ ಸಹಕಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ಸೇವಾ ಪಾಕ್ಷಿಕ ಅಂಗವಾಗಿ ಶನಿವಾರ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಕುಂದಾಪುರ ಶಾಸಕ ಎ.ಕಿರಣ್ ಕುವಾರ್ ಕೊಡ್ಗಿ ಉದ್ಘಾಟಿಸಿದರು. ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಕಿರಣ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಶುಭ ಹಾರೈಸಿದರು. ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಸೇವಾ ಪಾಕ್ಷಿಕ ಅಭಿಯಾನದ ಸಹ ಸಂಚಾಲಕಿ ಸೌರಭಿ ಪೈ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಸಂಪತ್ ಶೇರಿಗಾರ್, ಯುವ ಮೋರ್ಚಾ ಉಪಾಧ್ಯಕ್ಷ ಅಭಯ್ ದೀಕ್ಷಿತ್, ರಕ್ತ ನಿಧಿ ಟಕ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ, ಸದಸ್ಯರಾದ ವೈ ಸೀತಾರಾಮ ಶೆಟ್ಟಿ ಮತ್ತು ಎ.ಮುತ್ತಯ್ಯ ಶೆಟ್ಟಿ, ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪುರಸಭಾ ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು. ಸುಧೀರ್ ಕೆ.ಎಸ್. ವಂದಿಸಿದರು.