ಅಮೆರಿಕ ಸರಕುಗಳ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕೆ ಇಳಿಸಲು ಮುಂದಾಗಿದೆ; ಆದರೆ ಇದನ್ನು ಮೊದಲೇ ಮಾಡಬೇಕಿತ್ತು ಎಂದ ಟ್ರಂಪ್| Donald Trump

Donald Trump 1
Published on

Donald Trump: ಅಮೆರಿಕಾದ ಸರಕುಗಳ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕೆ ಇಳಿಸಲು ಮುಂದಾಗಿದೆ, ಆದರೆ ಬಹಳ ತಡವಾಯ್ತು. ಇದನ್ನು ಕೆಲ ವರ್ಷಗಳ ಹಿಂದೆಯೇ ಮಾಡಬೇಕಿತ್ತು ಎಂದು ಸೋಮವಾರ (ಸೆ. 01) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಕುರಿತು ತಮ್ಮ ಟ್ರೂತ್​ನಲ್ಲಿ ಪೋಸ್ಟ್ ಹಾಕಿರುವ ಡೊನಾಲ್ಡ್ ಟ್ರಂಪ್, "ಭಾರತದೊಂದಿಗೆ ನಾವು ಬಹಳ ಕಡಿಮೆ ವ್ಯವಹಾರ ಮಾಡುತ್ತೇವೆ, ಆದರೆ ಅವರು ನಮ್ಮೊಂದಿಗೆ ಅಪಾರ ಪ್ರಮಾಣದ ವ್ಯವಹಾರ ಮಾಡುತ್ತಾರೆ ಎಂಬುದು ಕೆಲವೇ ಜನರಿಗೆ ಅರ್ಥವಾಗುತ್ತದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಅವರು ನಮಗೆ ಬೃಹತ್ ಪ್ರಮಾಣದ ಸರಕುಗಳನ್ನು ಮಾರಾಟ ಮಾಡುತ್ತಾರೆ.

ನಾವು  ಅವರ ಅತಿದೊಡ್ಡ ಕ್ಲೈಂಟ್. ಆದರೆ ನಾವು ಅವುಗಳನ್ನು ಬಹಳ ಕಡಿಮೆ ಮಾರಾಟ ಮಾಡುತ್ತೇವೆ. ಭಾರತವು ತನ್ನ ಹೆಚ್ಚಿನ ತೈಲ ಮತ್ತು ಮಿಲಿಟರಿ ಉತ್ಪನ್ನಗಳನ್ನು ರಷ್ಯಾದಿಂದ ಖರೀದಿಸುತ್ತದೆ. ಯುಎಸ್‌ನಿಂದ ಬಹಳ ಕಡಿಮೆ ಖರೀದಿಸುತ್ತದೆ. ಈಗ ಭಾರತ ತಮ್ಮ ಸುಂಕಗಳನ್ನು ಶೂನ್ಯಕ್ಕೆ ಇಳಿಸಲು ಮುಂದಾಗಿದ್ದಾರೆ, ಆದರೆ ತಡವಾಗುತ್ತಿದೆ. ವರ್ಷಗಳ ಹಿಂದೆಯೇ ಹೀಗೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ಬಳಿಕ ಭಾರತದ ಸರಕುಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ್ದ ಟ್ರಂಪ್, ರಷ್ಯಾದ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ಭಾರತ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕಾಗಿ ತೈಲ ಖರೀದಿಸಿದ್ದಕ್ಕಾಗಿ ಭಾರತದ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದರು.  ಸದ್ಯ ಅಮೆರಿಕ ಒಟ್ಟು ಭಾರತದ ಮೇಲೆ ಶೇ. 50ರಷ್ಟು ಸುಂಕ ವಿಧಿಸಿದ್ದು ಆಗಸ್ಟ್ 27ರಿಂದ ಜಾರಿಗೆ ಬಂದಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net