

ಉಡುಪಿ: ಭಾರತ ಆರ್ಥಿಕ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಜಪಾನ್ ಮೀರಿಸಿ ಇದೀಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮಿದೆ. ಡಿಜಿಟಲ್ ಆರ್ಥಿಕತೆ ಬೆಳವಣಿಗೆ, ಬೃಹತ್ ಮೂಲಸೌಕರ್ಯ ಯೋಜನೆಗಳು ಮತ್ತು ಯುವಜನತೆ ಆರ್ಥಿಕಾಭಿವೃದ್ಧಿಯ ಇಂಧನಗಳಾಗಿವೆ ಎಂದು ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ ಹೇಳಿದರು.
ಅಜ್ಜರಕಾಡು ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜಯವಾಣಿ ವಿದ್ಯಾರ್ಥಿಮಿತ್ರ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಲು ಸಿದ್ಧರಾಗಬೇಕು. ಈ ನಿಟ್ಟಿನಲ್ಲಿ ವಿಜಯವಾಣಿ ವಿದ್ಯಾರ್ಥಿಮಿತ್ರ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕೆ ಮಾರ್ಗದರ್ಶನ ನೀಡಲಿದೆ ಎಂದರು.
ಮುಖ್ಯ ಶಿಕ್ಷಕಿ ಇಂದಿರಾ ಬಿ. ಉಪಸ್ಥಿತರಿದ್ದರು. ಹಿರಿಯ ವರದಿಗಾರ ಗೋಪಾಲಕೃಷ್ಣ ಪಾದೂರು ನಿರೂಪಿಸಿದರು. ಶಿಕ್ಷಕಿ ಜ್ಯೋತಿ ವಂದಿಸಿದರು. ಪ್ರಸರಣ ವಿಭಾಗದ ನವೀನ್ ನಾಯರಿ ಸಹಕರಿಸಿದರು.