

R Ashwin : ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಇಂದು (ಡಿ.18) ಡ್ರಾನಲ್ಲಿ ಅಂತ್ಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಕೊನೆಯಲ್ಲಿ ಅಶ್ವಿನ್ ಅವರು ತಮ್ಮ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದೇ ವೇಳೆ ನಿವೃತ್ತಿ ಘೋಷಣೆ ಮಾಡಿದ ಅಶ್ವಿನ್, ಪಂದ್ಯದ ನಡುವೆ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅವರನ್ನು ತಬ್ಬಿಕೊಂಡು ಭಾವುಕರಾದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಂದ್ಯದ ಬಳಿಕ ಮಾತನಾಡಿದ ಅಶ್ವಿನ್, ನಾನು ನಿಮ್ಮ ಸಮಯವನ್ನು ಹೆಚ್ಚು ತೆಗೆದುಕೊಳ್ಳುವುದಿಲ್ಲ. ಭಾರತೀಯ ಕ್ರಿಕೆಟಿಗನಾಗಿ ಇಂದು ನನಗೆ ಕೊನೆಯ ದಿನವಾಗಿದೆ ಎಂದರು.
ಅಂದಹಾಗೆ ಅಶ್ವಿನ್ ಅವರು 106 ಟೆಸ್ಟ್ ಪಂದ್ಯಗಳಲ್ಲಿ 24ರ ಸರಾಸರಿಯಲ್ಲಿ 537 ವಿಕೆಟ್‌ಗಳನ್ನು ಪಡೆದು ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. 132 ಟೆಸ್ಟ್‌ಗಳಲ್ಲಿ 619 ವಿಕೆಟ್‌ಗಳನ್ನು ಪಡೆದಿರುವ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಅನಿಲ್ ಕುಂಬ್ಳೆ ಬಳಿಕ ಭಾರತದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಾಗಿ ವೃತ್ತಿ ಬದುಕನ್ನು ಅಶ್ವಿನ್ ಕೊನೆಗೊಳಿಸಿದರು.
ಸದ್ಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಮೂರು ಟೆಸ್ಟ್ ಪಂದ್ಯದಲ್ಲಿ ಕೇವಲ ಒಂದು ಟೆಸ್ಟ್ ಪಂದ್ಯದಲ್ಲಿ ಮಾತ್ರ ಅಶ್ವಿನ್ ಆಡಿದರು. ಅಡಿಲೇಡ್‌ನಲ್ಲಿ ನಡೆದ ಅಹರ್ನಿಶಿ ಪಂದ್ಯದಲ್ಲಿ 53ಕ್ಕೆ 1 ವಿಕೆಟ್ ಪಡೆದರು. ಈ ಹಿಂದಿನ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 3-0 ಸೋಲು ಅನುಭವಿಸಿತು. ಈ ಸರಣಿಯಲ್ಲಿ ಅಶ್ವಿನ್ 41.22 ಸರಾಸರಿಯಲ್ಲಿ ಒಂಬತ್ತು ವಿಕೆಟ್ಳನ್ನು ಪಡೆದಿದ್ದರು.
ಅಶ್ವಿನ್ ಅವರು ಬೌಲಿಂಗ್ನಲ್ಲಿ ಮಾತ್ರವಲ್ಲದೆ, ಆರು ಶತಕಗಳು ಮತ್ತು 14 ಅರ್ಧಶತಕಗಳೊಂದಿಗೆ 3503 ಟೆಸ್ಟ್ ರನ್‌ಗಳನ್ನು ಗಳಿಸಿ, ಬ್ಯಾಟಿಂಗ್ನಲ್ಲೂ ಮಿಂಚಿದ್ದಾರೆ. 3000ಕ್ಕೂ ಹೆಚ್ಚು ರನ್ ಮತ್ತು 300 ವಿಕೆಟ್‌ಗಳೊಂದಿಗೆ 11 ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. (ಏಜೆನ್ಸೀಸ್)