India-pakistan: ಭಯೋತ್ಪಾದಕ ಪಾಕ್​ ಪರಿಣಾಮ ಎದುರಿಸಬೇಕಾದೀತು': ವಿಶ್ವಸಂಸ್ಥೆಯಲ್ಲಿ ಪಾಕ್​ಗೆ ಭಾರತ ತಿರುಗೇಟು

India-Pak
Published on

ನ್ಯೂಯಾರ್ಕ್: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತ ಮತ್ತೊಮ್ಮೆ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಿದೆ. ಭಯೋತ್ಪಾದನೆಗೆ ಜಾಗತಿಕ ಖ್ಯಾತಿ ಹೊಂದಿರುವ ಪಾಕ್​ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಮೇಲೆ "ದಾಳಿ ಮಾಡುವ" ಮತ್ತು ವಿಶ್ವಸಂಸ್ಥೆಯ ವೇದಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಎತ್ತುವ "ಧೈರ್ಯ" ಹೊಂದಿದ್ದನ್ನು "ಅಪಹಾಸ್ಯ" ಎಂದು ಭಾರತ ಕರೆದಿದೆ. India-pakistan

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಅಧಿವೇಶನದಲ್ಲಿ (ಯುಎನ್‌ಜಿಎ) ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಶುಕ್ರವಾರ ಮಾತನಾಡುವಾಗ, ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಎತ್ತಿದ್ದರು. ಕಾಶ್ಮೀರ ಭಾರತಕ್ಕೆ ಸವಾಲು ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತವು ಬಲವಾಗಿ ಛೀಮಾರಿ ಹಾಕಿದೆ.

ವಿಶ್ವಸಂಸ್ಥೆಯ ಭಾರತದ ಖಾಯಂ ಮಿಷನ್‌ನ ಮೊದಲ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ಕಾಶ್ಮೀರದ ಬಗ್ಗೆ ಪಾಕಿಸ್ತಾನ "ಬೂಟಾಟಿಕೆ" ಮಾತುಗಳನ್ನಾಡುವುದು ಅನಗತ್ಯ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳನ್ನು ಅಡ್ಡಿಪಡಿಸಲು ಭಯೋತ್ಪಾದನೆಯನ್ನು ಬಳಸಿದೆ ಎಂದು ಹೇಳಿದರು.

ಸತ್ಯವೆಂದರೆ ಪಾಕಿಸ್ತಾನವು ನಮ್ಮ ಪ್ರದೇಶವನ್ನು ಅಪೇಕ್ಷಿಸುತ್ತದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳನ್ನು ಅಡ್ಡಿಪಡಿಸಲು ನಿರಂತರವಾಗಿ ಭಯೋತ್ಪಾದನೆಯನ್ನು ಬಳಸುತ್ತಿದೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರು.

ಪಾಕಿಸ್ತಾನವು ತನ್ನ ನೆರೆದೇಶದ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಯನ್ನು ಅಸ್ತ್ರವಾಗಿ ದೀರ್ಘಕಾಲ ಬಳಸಿಕೊಂಡಿದೆ. ನಮ್ಮ ಸಂಸತ್ತು, ನಮ್ಮ ಆರ್ಥಿಕ ರಾಜಧಾನಿ ಮುಂಬೈ, ಮಾರುಕಟ್ಟೆ ಸ್ಥಳಗಳು ಮತ್ತು ತೀರ್ಥಯಾತ್ರೆಯ ಮಾರ್ಗಗಳ ಮೇಲೆ ದಾಳಿ ಮಾಡಿದೆ. ಪಟ್ಟಿ ಉದ್ದವಾಗಿದೆ. ಇಂತಹ ದೇಶವು ಎಲ್ಲಿಯಾದರೂ ಹಿಂಸಾಚಾರದ ಬಗ್ಗೆ ಮಾತನಾಡುವುದು ಬೂಟಾಟಿಕೆಯಾಗಿದೆ. ರಿಗ್ಗಡ್ ಚುನಾವಣೆಗಳ ಇತಿಹಾಸ ಹೊಂದಿರುವ ದೇಶವು ಪ್ರಜಾಪ್ರಭುತ್ವದಲ್ಲಿ ರಾಜಕೀಯ ಆಯ್ಕೆಗಳ ಬಗ್ಗೆ ಮಾತನಾಡುವುದು ಇನ್ನೂ ಅಸಾಮಾನ್ಯವಾಗಿದೆ ಎಂದು ಮಂಗಳಾನಂದನ್ ಹೇಳಿದರು.

ಪರಿಣಾಮ ಎದುರಿಸಬೇಕಾದೀತು: India-pakistan

ಭಯೋತ್ಪಾದನೆಯೊಂದಿಗೆ ಯಾವುದೇ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವಾಗಿ, ಭಾರತದ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಯು ಅನಿವಾರ್ಯವಾಗಿ ಪರಿಣಾಮಗಳನ್ನು ಆಹ್ವಾನಿಸುತ್ತಿದೆ ಎಂಬುದನ್ನು ಪಾಕಿಸ್ತಾನ ಅರಿತುಕೊಳ್ಳಬೇಕು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net