18.5 C
Bangalore
Monday, December 16, 2019

ಕಪಟಿ ಪಾಕ್​ಗೆ ತಪರಾಕಿ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ನವದೆಹಲಿ: ಒಂದೆಡೆ ಶಾಂತಿ ಪ್ರಸ್ತಾಪ ಮಾಡುತ್ತ, ಮತ್ತೊಂದೆಡೆ ಭಯೋತ್ಪಾದಕರನ್ನು ಕಾಶ್ಮೀರಕ್ಕೆ ಅಟ್ಟಿ ಪೊಲೀಸರು, ಯೋಧರ ರಕ್ತ ಹರಿಸುತ್ತ ತೆರೆಮರೆಯಿಂದಲೇ ಗೋಮುಖ ವ್ಯಾಘ್ರನ ಆಟ ಆಡುತ್ತಿರುವ ಪಾಕಿಸ್ತಾನಕ್ಕೆ ನರೇಂದ್ರ ಮೋದಿ ಸರ್ಕಾರ ಕಪಾಳಮೋಕ್ಷ ಮಾಡಿದೆ.

ಬಾಂಧವ್ಯ ಮರುಸ್ಥಾಪನೆ ಹೆಸರಲ್ಲಿ ಭಾರತದ ಎದುರು ಶಾಂತಿ ಮಾತುಕತೆ ಪ್ರಸ್ತಾಪವನ್ನು ಮುಂದಿಟ್ಟಿದ್ದ ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿದೆ. ಕಾಶ್ಮೀರದ ಗಡಿಯಲ್ಲಿ ಒಂದೇ ದಿನ ಮೂವರು ಪೊಲೀಸರನ್ನು ಅಪಹರಿಸಿ ಉಗ್ರರು ಹತ್ಯೆಗೈದ ಬೆನ್ನಲ್ಲೇ ಭಾರತ ಈ ಖಡಕ್ ನಿರ್ಧಾರ ಕೈಗೊಂಡಿದೆ. ಪಾಕ್ ಪ್ರಸ್ತಾವನೆಯನ್ನು ಭಾರತ ಒಪ್ಪಿದಲ್ಲಿ ಮುಂದಿನ ವಾರ ನ್ಯೂಯಾರ್ಕ್​ನಲ್ಲಿ ಆಯೋಜನೆಗೊಂಡಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ವೇಳೆ ಭಾರತ-ಪಾಕಿಸ್ತಾನದ ವಿದೇಶಾಂಗ ಸಚಿವರ ಸಭೆ ನಡೆಯಬೇಕಾಗಿತ್ತು. ಒಂದು ಹಂತದಲ್ಲಿ ಇಮ್ರಾನ್ ಮುಂದಿಟ್ಟಿದ್ದ ಶಾಂತಿ ಮಾತುಕತೆ ಪ್ರಸ್ತಾವನೆಯನ್ನು ಒಪ್ಪಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ಕಾಶ್ಮೀರದಲ್ಲಿ ಉಗ್ರರು ಶುಕ್ರವಾರ ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆಗೈದಿದ್ದಾರೆ.

ಇದರ ಜತೆ ಉಗ್ರ ಬುರ್ಹಾನ್ ವಾನಿಯನ್ನು ಕಾಶ್ಮೀರದ ಸ್ವಾತಂತ್ರ್ಯ ಯೋಧ ಎಂದು ಬಿಂಬಿಸಿ ಪಾಕಿಸ್ತಾನ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿದ್ದು ಕೇಂದ್ರವನ್ನು ಕೆರಳಿಸಿದೆ. ಹೀಗಾಗಿ ಭಾರತ ಸರ್ಕಾರ ಪಾಕ್ ಆಹ್ವಾನವನ್ನು ತಿರಸ್ಕರಿಸಿದೆ.

ಇಮ್ರಾನ್ ಒಲವು: ಭಾರತವಿರೋಧಿ ನಿಲುವಿನ ಇಮ್ರಾನ್ ಖಾನ್, ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾರತದ ಜತೆ ಮತ್ತೆ ಮಾತುಕತೆ ನಡೆಸಲು ಉತ್ಸಾಹ ತೋರಿದ್ದಾರೆ. ಕಾಶ್ಮೀರ ಸಹಿತ ಎಲ್ಲ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಯತ್ನಿಸಲಾಗುವುದು ಎಂದು ಅವರು ಇತ್ತೀಚೆಗಷ್ಟೇ ಹೇಳಿದ್ದರು. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಈ ಬಯಕೆಯನ್ನು ಪ್ರಸ್ತಾಪಿಸಿದ್ದರು.

2015 ಸಭೆ ಅಂತಿಮ

ಹಾರ್ಟ್ ಆಫ್ ಏಷ್ಯಾ ಸಮಿಟ್​ನಲ್ಲಿ ಭಾಗಿಯಾಗಲು 2015 ಡಿಸೆಂಬರ್​ನಲ್ಲಿ ಇಸ್ಲಾಮಾಬಾದ್​ಗೆ ತೆರಳಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಅಂದಿನ ಪಾಕ್ ವಿದೇಶಾಂಗ ಸಚಿವ ಸರ್ತಾಜ್ ಅಜೀಜ್​ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ.

ಮಾತು ಮುರಿದಿದ್ದೇಕೆ?

# ಸೆ.18ರಂದು ಕಾಶ್ಮೀರ ಗಡಿಯಲ್ಲಿ ಭಾರತೀಯ ಯೋಧನ ಕತ್ತು ಸೀಳಿ ಹತ್ಯೆ ಮಾಡಿದ ಪಾಕ್ ಯೋಧರು

# ಸೆ.20ರಂದು ಪಾಕ್ ಉಗ್ರರಿಂದ ಕಾಶ್ಮೀರದ ಮೂವರು ಪೊಲೀಸರ ಅಪಹರಣ, ಹತ್ಯೆ

# ಕಾಶ್ಮೀರ ಉಗ್ರ ಬುರ್ಹಾನ್ ವಾನಿಯ ಅಂಚೆ ಚೀಟಿ ಬಿಡುಗಡೆ ಮಾಡಿ, ಸ್ವಾತಂತ್ರ್ಯ ಯೋಧ ಎಂದು ಬಿಂಬಿಸಿದ್ದು

# ಇಮ್ರಾನ್ ಖಾನ್ ಸರ್ಕಾರ ಪಾಕ್ ಸೇನೆಯ ಕೈಗೊಂಬೆ ಎಂಬ ತಜ್ಞರ ಅಭಿಪ್ರಾಯ

# ಶಾಂತಿ ಮಾತುಕತೆಗೆ ಪಾಕ್ ಸೇನೆ ಹಾಗೂ ಗುಪ್ತಚರ ಇಲಾಖೆ ಐಎಸ್​ಐ ಅಡ್ಡಗಾಲು ಹಾಕುವ ಸಾಧ್ಯತೆ

# ಶಾಂತಿ ಮಾತುಕತೆ ಹಾಗೂ ಭಯೋತ್ಪಾದನೆ ಒಟ್ಟಿಗೇ ಸಾಗುವುದಿಲ್ಲ ಎಂಬ ಸಂದೇಶ ರವಾನೆ

ಏಟಿಗೆ ಎದಿರೇಟು

> 2016ರ ಜನವರಿಯಲ್ಲಿ ಪಠಾಣ್​ಕೋಟ್ ಸೇನಾನೆಲೆ ಮೇಲೆ ಭಯೋತ್ಪಾದನಾ ದಾಳಿ ನಡೆದ ಬಳಿಕ ಪಾಕಿಸ್ತಾನ ಜತೆಗಿನ ಮಾತುಕತೆಯನ್ನು ಭಾರತ ರದ್ದುಗೊಳಿಸಿತ್ತು.

> ಕಾಶ್ಮೀರದ ಪ್ರತ್ಯೇಕತಾವಾದಿಗಳ ಜತೆ ಭಾರತದ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಮಾತುಕತೆ ನಡೆಸಿದ್ದಾರೆ ಎಂಬ ಕಾರಣಕ್ಕೆ ಪಾಕ್ ಜತೆಗಿನ ದ್ವಿಪಕ್ಷೀಯ ಸಂಬಂಧವನ್ನು ಭಾರತ ರದ್ದುಗೊಳಿಸಿತ್ತು

> ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾದಾಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್ ದಾಳಿ ನಡೆಸುವ ಮೂಲಕ ದಿಟ್ಟ ಪ್ರತ್ಯುತ್ತರ ನೀಡಿತ್ತು.

ಕರಾಳ ಮುಖ ಬಯಲು

ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಗಮನಿಸಿದರೆ ಪಾಕಿಸ್ತಾನ ಜತೆಗಿನ ಶಾಂತಿ ಮಾತುಕತೆಗೆ ಯಾವುದೇ ಅರ್ಥವಿಲ್ಲ. ಶಾಂತಿ ಮಾತುಕತೆ ಹಿಂದಿನ ಪಾಕಿಸ್ತಾನದ ಕರಾಳ ಮುಖವಾಡ ಈಗ ಬಯಲಾಗಿದೆ. ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ನೂತನ ಪ್ರಧಾನಿ ಇಮ್ರಾನ್ ಖಾನ್ ನಿಜವಾದ ಮುಖ ಇಡೀ ವಿಶ್ವಕ್ಕೆ ತಿಳಿದಂತಾಗಿದೆ

| ರವೀಶ್ ಕುಮಾರ್ ವಿದೇಶಾಂಗ ಸಚಿವಾಲಯದ ವಕ್ತಾರ

ಮೂವರು ಪೊಲೀಸರ ಹತ್ಯೆ

ಶ್ರೀನಗರ: ಪೊಲೀಸ್ ಹುದ್ದೆ ತೊರೆಯುವಂತೆ ಕಣಿವೆ ರಾಜ್ಯದ ಪೊಲೀಸರಿಗೆ ಎಚ್ಚರಿಕೆ ನೀಡಿದ್ದ ಉಗ್ರರು ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಜಿಲ್ಲೆಯ ಬಡಗುಂಡ್, ಪಹ್ರಾನಲ್ಲಿನ ಮೂವರು ಪೊಲೀಸರ ಮನೆಗೆ ನುಗ್ಗಿದ ಭಯೋತ್ಪಾದಕರ ತಂಡ ಈ ದುಷ್ಕೃತ್ಯ ಎಸಗಿದೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...