

Modi: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಇಂದು (12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಆಪರೇಷನ್ ಸಿಂಧೂರ್ ಆರಂಭವಾದ ನಂತರದ ಅವರ ಮೊದಲ ಸಾರ್ವಜನಿಕ ಹೇಳಿಕೆ ಇದಾಗಿದೆ. ಯುದ್ಧದಲ್ಲಿ ತೀವ್ರತೆ ಹೆಚ್ಚಾದ ಬಳಿಕ ಭೂಮಿ, ವಾಯು ಮತ್ತು ಸಮುದ್ರದಾದ್ಯಂತದ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಂದ ಮಾಡಿಕೊಂಡ ಎರಡು ದಿನಗಳ ನಂತರ ಮೋದಿ ಈ ಭಾಷಣ ಆರಂಭಿಸಲಿದ್ದಾರೆ.
ಈಗಾಗಲೇ ಭಾರತದ ತಂಟೆಗೆ ಬಂದವರ ಸ್ಥಿತಿ ಏನಾಗುತ್ತೆ ಎಂಬುದನ್ನು ಪ್ರಧಾನಿಗಳು ತೋರಿಸಿಕೊಟ್ಟಿದ್ದು, ಇಂದು ಸಹ ಅಜಿತ್ ದೋವಲ್ ಸೇರಿದಂತೆ ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿಗಳು ಸಾಲು ಸಾಲು ಸಭೆಗಳನ್ನು ನಡೆಸಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಪ್ರಧಾನಿಗಳು ಏನು ಮಾತನಾಡಲಿದ್ದಾರೆ ಎಂಬುದರ ಬಗ್ಗೆ ಭಾರತ ಮಾತ್ರವಲ್ಲದೇ ಇಡೀ ವಿಶ್ವವೇ ಕಾದು ಕುಳಿತಿದೆ. ಆಪರೇಷನ್ ಸಿಂದೂರ್ ಕಾರ್ಯಾಚರಣೆ, ಪಾಕಿಸ್ತಾನಕ್ಕೆ ತಿರುಗೇಟು, ಕದನ ವಿರಾಮ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಪ್ರಧಾನಿಗಳು ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.