More

    ಭರ್ಜರಿ ಉದ್ಯೋಗಾವಕಾಶ: 12,828 ಹುದ್ದೆಗಳ ಭರ್ತಿಗೆ ಅಧಿಸೂಚನೆ

    ದೆಹಲಿ: ದೇಶಾದ್ಯಂತ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 12,828 ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು indiapostgdsonline.gov.in.ನಲ್ಲಿ ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸುವ ಪ್ರಕ್ರಿಯೆ 2023ರ ಮೇ 22ರಂದು ಪ್ರಾರಂಭವಾಗಿ ಜೂನ್ 11ರಂದು ಮುಕ್ತಾಯವಾಗುತ್ತದೆ. ಅರ್ಜಿ ಸಲ್ಲಿಸುವ ವೇಳೆ ಉಂಟಾಗುವ ದೋಷಗಳನ್ನು ತಿದ್ದುಪಡಿಮಾಡಲು ಜೂನ್ 12ರಿಂದ ಜೂನ್ 14ರವೆರೆಗೆ ಕಾಲಾವಕಾಶವಿರುತ್ತದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಈ ಕೆಳಗಿನಂತಿವೆ.

    ಇದನ್ನೂ ಓದಿ: ಒಂದೇ ಬಾರಿಗೆ 5 ಹೆಣ್ಣು ಮಕ್ಕಳಿಗೆ ಜನ್ಮ ಕೊಟ್ಟ ಮಹಿಳೆ; ತಾಯಿ, ಮಕ್ಕಳು ಸುರಕ್ಷಿತ

    ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ:
    ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲಾ ಶಿಕ್ಷಣ ಮಂಡಳಿಯಿಂದ ನಡೆಸಲ್ಪಡುವ 10ನೇ ತರಗತಿ ಪರೀಕ್ಷೆಯನ್ನು ಪಾಸಾಗಿರಬೇಕು. ಈ ಪರೀಕ್ಷೆಯಲ್ಲಿ ಗಣಿತ ಮತ್ತು ಇಂಗ್ಲಿಷ್‌ ವಿಷಯಗಳನ್ನು ಕಡ್ಡಾಯವಾಗಿ ಅಧ್ಯಾಯ ಮಾಡಿರಬೇಕು. ಅಭ್ಯರ್ಥಿಯ ವಯೋಮಿತಿ 18ರಿಂದ 40 ವರ್ಷಗಳ ನಡುವೆ ಇರಬೇಕು.

    ಆಯ್ಕೆ ಪ್ರಕ್ರಿಯೆ:

    ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ:
    ಎಲ್ಲಾ ಹುದ್ದೆಗಳಿಗೆ ಅರ್ಜಿದಾರರು ರೂ.100/- ಶುಲ್ಕವನ್ನು ಪಾವತಿಸಬೇಕು. ಎಲ್ಲ ಮಹಿಳೆರಿಗೆ, ಪರಿಶಿಷ್ಟ ಜಾತಿ/ಪಂಗಡದವರಿಗೆ, ವಿಕಲಾಂಗರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts