

ನವದೆಹಲಿ: ಭಾರತದಲ್ಲಿ ಕರೊನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2411 ಹೊಸ ಕರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 37,776ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಹಾಗೇ 24 ಗಂಟೆಯಲ್ಲಿ 71 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1223ಕ್ಕೆ ಏರಿದೆ.
ರಾಷ್ಟ್ರಾದ್ಯಂತ ಲಾಕ್ಡೌನ್ ಇದ್ದರೂ ಕರೊನಾ ಪ್ರಸರಣದ ಪ್ರಮಾಣ ಹೆಚ್ಚುತ್ತಲೇ ಇರುವುದು ಆತಂಕ ಮೂಡಿಸಿದೆ. ಈಗಾಗಲೇ ದೇಶವನ್ನು ರೆಡ್, ಆರೆಂಜ್, ಗ್ರೀನ್ ಝೋನ್ಗಳನ್ನಾಗಿ ವಿಂಗಡಿಸಲಾಗಿದ್ದು, ಆಯಾ ಪ್ರದೇಶಗಳಲ್ಲಿ ಕರೊನಾ ಗಂಭೀರತೆ ನೋಡಿಕೊಂಡು, ಕೆಲವೊಂದು ಸಡಿಲಿಕೆಗಳೊಂದಿಗೆ ಲಾಕ್ಡೌನ್ನ್ನು ಮೇ 17ರವರೆಗೆ ವಿಸ್ತರಿಸಲಾಗಿದೆ. (ಏಜೆನ್ಸೀಸ್)