More

    ಖಲಿಸ್ತಾನಿ ಭಯೋತ್ಪಾದಕನ ಹತ್ಯೆ; ಕೆನಡಾ ಆರೋಪ ನಿರಾಕರಿಸಿದ ಭಾರತ

    ನವದೆಹಲಿ: ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಾಲಿಸ್ತಾನ್ ಟೈಗರ್ ಫೋರ್ಸ್ (KTf) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಕ್ಕೆ ಭಾರತ ಸರ್ಕಾರ ತಿರುಗೇಟು ನೀಡಿದೆ.

    ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೂ ಭಾರತಕ್ಕೂ ಯಾವುದೇ ಸಂಬಂಧವಿಲ್ಲ. ಕೆನಡಾದ ಪ್ರಧಾನಿ ಜಸ್ಟಿನ್​ ಟ್ರುಡೊ ಮಾಡಿರುವ ಆರೋಪ ಅಸಂಬದ್ದವಾಗಿದ್ದು, ಯಾರೋ ಹೇಳಿಕೊಟ್ಟಂತೆ ಮಾತನಾಡುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ಕಿಡಿಕಾರಿದೆ.

    ಕೆನಡಾದ ಪ್ರಧಾನಿ ಮಾಡಿರುವ ಆರೋಪಗಳನ್ನು ತಿರಸ್ಕರಿಸುವ ಭಾರತ ಸರ್ಕಾರ ಪ್ರತ್ಯೇಕವಾದಿಗಳಿಗೆ ಸಹಾನೂಭೂತಿ ವ್ಯಕ್ತಪಡಿಸುತ್ತಿರುವುದು ಕಳವಳಕಾರಿಯಾಗಿದೆ. ಕೊಲೆ, ಭಯೋತ್ಪಾದನೆ, ಮಾನವ ಕಳ್ಳಸಾಗಾಣೆ ಮತ್ತು ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಗೆ ಕೆನಡಾದಲ್ಲಿ ಆಶ್ರಯ ನೀಡಲಾಗಿದೆ. ಇಂತಹವರ ವಿರುದ್ಧ ಮೊದಲು ನೀವು ಕ್ರಮಕೈಗೊಳ್ಳಬೇಕು.

    ಕೆನಡಾ ಸರ್ಕಾರ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಖಲಿಸ್ತಾನಿ ಪ್ರತ್ಯೇಕವಾದಿಗಳು ಹಾಗೂ ಭಯೋತ್ಪಾದಕರ ಮೇಲಿನ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ವಿದೇಶಾಂಗ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts