

ಬಾಂಗ್ಲಾದೇಶ: ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಗೆಲುವಿನ ನಂತರ ಬಿಸಿಸಿಐ ಪ್ರಮುಖ ನಿರ್ಣಯ ತೆಗೆದುಕೊಂಡಿದೆ. ಎರಡನೇ ಟೆಸ್ಟ್ ಸರಣಿಯನ್ನೂ ಕೈವಶ ಮಾಡಿಕೊಳ್ಳುವ ಉದ್ದೇಶದಿಂದ ಅದೇ ತಂಡವನ್ನು ಉಳಿಸಿಕೊಳ್ಳಲು ಆಯ್ಕೆ ಸಮಿತಿ ನಿರ್ಧರಿಸಿದೆ. india-bangla 2nd test
ಎರಡನೇ ಹಾಗೂ ಅಂತಿಮ ಟೆಸ್ಟ್ ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಚೆನ್ನೈನಲ್ಲಿ ಮುಕ್ತಾಯಗೊಂಡ ಮೊದಲ ಟೆಸ್ಟ್‌ನಲ್ಲಿ ಭಾರತ ನೀಡಿದ್ದ 515 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾದೇಶವು ಅಲ್ಪ ಮೊತ್ತಕ್ಕೆ ಅಂದರೆ 234 ರನ್‌ಗಳಿಗೆ ಆಲೌಟ್ ಆಯಿತು.
ರೋಹಿತ್ ಶರ್ಮಾ(ಸಿ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ಡಬ್ಲ್ಯುಕೆ), ಧ್ರುವ್ ಜುರೆಲ್ (ಡಬ್ಲ್ಯುಕೆ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.