600 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ; ಮೂಲಗಳು| Drone

blank

ನವದೆಹಲಿ; ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಕ್ರೂರವಾಗಿ ಹತ್ಯೆ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಸಶಸ್ತ್ರ ಪಡೆಗಳು ತ್ವರಿತಗತಿಯಾಗಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಆಪರೇಷನ್ ಸಿಂಧೂರ್​ಅನ್ನು ಪ್ರಾರಂಭಿಸಿದವು. ಇನ್ನೂ ಪಾಕಿಸ್ತಾನ ಹಾಗೂ ಭಾರತದ ನಡುವಿನ ಸಂಘರ್ಷದಲ್ಲಿ ಪಾಕಿಸ್ತಾನ ಕಳುಹಿಸಿದ 100 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತ ಹೊಡೆದುರುಳಿಸಿದ್ದಾಗಿ ಮೂಲಗಳು ತಿಳಿಸಿವೆ.

blank

ಇದನ್ನೂ ಓದಿ: ನಿದ್ರೆಯೂ ಇಲ್ಲ, ಶೌಚಾಲಯಕ್ಕೂ ವಿರಾಮವಿರಲಿಲ್ಲ; ಪಾಕಿಸ್ತಾನದಲ್ಲಿ ಅಗ್ನಿಪರೀಕ್ಷೆ ಎದುರಿಸಿದ್ದ ಬಿಎಸ್‌ಎಫ್ ಯೋಧ | Bsf- jawan

ರಕ್ಷಣಾ ಸಚಿವಾಲಯದ ಮೂಲಗಳ ಪ್ರಕಾರ, ಭಾರತೀಯ ಪಡೆಗಳು ಒಂಬತ್ತು ಸ್ಥಳಗಳಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಯಶಸ್ವಿಯಾಗಿ ತಟಸ್ಥಗೊಳಿಸಿದವು. ಭಾರತೀಯ ವಾಯು ರಕ್ಷಣಾ ಪಡೆ ಸೇನೆಯೊಂದಿಗೆ ಹೋರಾಡಿ 600 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹೇಳಲಾಗಿದೆ. ವೈಮಾನಿಕ ಬೆದರಿಕೆಗಳ ಅಲೆಯನ್ನು ಎದುರಿಸಲು 1,000 ಕ್ಕೂ ಹೆಚ್ಚು ಬಂದೂಕು ವ್ಯವಸ್ಥೆಗಳು ಮತ್ತು ಸುಮಾರು 750 ಕಿರು ಮತ್ತು ಮಧ್ಯಮ ಶ್ರೇಣಿಯ ಕ್ಷಿಪಣಿಗಳನ್ನು ಸಕ್ರಿಯಗೊಳಿಸಲಾಯ್ತು.

ಇದನ್ನೂ ಓದಿ:ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ವಂಚನೆ; ಚೀನಾ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ವಂಚಕರ ಬಂಧನ| Fraud

ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನದ 11 ವಾಯುನೆಲೆಗಳು ಭಾರೀ ಹಾನಿಯನ್ನು ಅನುಭವಿಸಿವೆ ಎಂದು ಭಾರತೀಯ ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಗಡಿಯಾಚೆಯಿಂದ ಸಂಭಾವ್ಯ ಪ್ರತಿಕ್ರಿಯೆಯನ್ನು ಭಾರತೀಯ ಸೇನೆ ನಿರೀಕ್ಷಿಸಿತ್ತು. ಪೂರ್ವಸಿದ್ಧತಾ ಕಾರ್ಯವಾಗಿ, ಜಂಟಿ ವಾಯು ರಕ್ಷಣಾ ಕೇಂದ್ರವನ್ನು ಸ್ಥಾಪಿಸಲಾಯಿತು, ಅಲ್ಲಿ ಭಾರತೀಯ ವಾಯುಪಡೆ ಮತ್ತು ಭಾರತೀಯ ಸೇನೆಯು ಡ್ರೋನ್ ದಾಳಿಯನ್ನು ಹಿಮ್ಮೆಟ್ಟಿಸಲು ಮತ್ತು ಪ್ರಮುಖ ಕಾರ್ಯತಂತ್ರದ ಸ್ವತ್ತುಗಳನ್ನು ರಕ್ಷಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿದವು.

ದೇಶದ ಯೋಧರು, ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸುತ್ತಾರೆ; ಮಧ್ಯಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ| Jagdish-devda

ನಿದ್ರೆಯೂ ಇಲ್ಲ, ಶೌಚಾಲಯಕ್ಕೂ ವಿರಾಮವಿರಲಿಲ್ಲ; ಪಾಕಿಸ್ತಾನದಲ್ಲಿ ಅಗ್ನಿಪರೀಕ್ಷೆ ಎದುರಿಸಿದ್ದ ಬಿಎಸ್‌ಎಫ್ ಯೋಧ | Bsf- jawan

(ಏಜೆನ್ಸೀಸ್)

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank