ಒಮಿಕ್ರಾನ್ ಭಯ; ಭಾರತ-ದಕ್ಷಿಣ ಆಫ್ರಿಕಾ ಸರಣಿಯ ಎಲ್ಲ ಪಂದ್ಯಗಳಿಗೆ ಪ್ರೇಕ್ಷಕರಿಲ್ಲ!

ind vs sa web
Published on

ಸೆಂಚುರಿಯನ್: ಕರೊನಾ ವೈರಸ್ ಹೊಸ ತಳಿ ಒಮಿಕ್ರಾನ್ ಭೀತಿಯಿಂದಾಗಿ ಭಾರತ ಮತ್ತು ಆತಿಥೇಯ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಮತ್ತು ಏಕದಿನ ಸರಣಿಯ ಎಲ್ಲ ಪಂದ್ಯಗಳಿಗೆ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಎಲ್ಲ 6 ಪಂದ್ಯಗಳ ಟಿಕೆಟ್‌ಗಳನ್ನು ಮಾರಾಟ ಮಾಡುವುದಿಲ್ಲ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಸೋಮವಾರ ತಿಳಿಸಿದೆ.

ದಕ್ಷಿಣ ಆಫ್ರಿಕಾ ಸರ್ಕಾರದ ಮಾರ್ಗಸೂಚಿಯಂತೆ ಪಂದ್ಯದ ಪ್ರತಿ ದಿನದಾಟಕ್ಕೆ ಗರಿಷ್ಠ 2 ಸಾವಿರ ಪ್ರೇಕ್ಷಕರಿಗೆ ಮಾತ್ರ ಪ್ರವೇಶ ನೀಡಲು ಈ ಮುನ್ನ ಚಿಂತಿಸಲಾಗಿತ್ತು. ಆದರೆ ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ಪ್ರತಿದಿನ ಸರಾಸರಿ 20 ಸಾವಿರಕ್ಕೂ ಅಧಿಕ ಕರೊನಾ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಯಾವುದೇ ಅಪಾಯವನ್ನು ಮೈಮೇಲೆ ಎಳೆದುಕೊಳ್ಳದಿರಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಒಮಿಕ್ರಾನ್ ಭೀತಿಯ ನಡುವೆಯೂ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಹರಿಣಗಳ ನಾಡಿಗೆ ಬಯೋಬಬಲ್ ವಾತಾವರಣದಲ್ಲಿ ಪ್ರವಾಸ ಕೈಗೊಂಡಿದ್ದರೆ, ಇಲ್ಲಿನ ಕೆಲ ದೇಶೀಯ ಪಂದ್ಯಗಳನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಮುಂದೂಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net