26.8 C
Bangalore
Friday, December 13, 2019

ಬುಮ್ರಾ ಮಾರಕ ಬೌಲಿಂಗ್​: 151 ರನ್​ಗೆ ಆಸ್ಟ್ರೇಲಿಯಾ ಆಲೌಟ್​

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮೆಲ್ಬೋರ್ನ್​: ಟೀಂ ಇಂಡಿಯಾದ ಯುವ ವೇಗಿ ಜಸ್​ಪ್ರೀತ್​ ಬುಮ್ರಾ (33 ಕ್ಕೆ6) ಮಾರಕ ಬೌಲಿಂಗ್​ ದಾಳಿಗೆ ಸಿಲುಕಿದ ಆಸ್ಟ್ರೇಲಿಯಾ ನಂತರ ಮೂರನೇ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ ಕೇವಲ 151 ರನ್​ಗಳಿಗೆ ಆಲೌಟಾಗಿದೆ. ಭಾರತಕ್ಕೆ ಮೊದಲ ಇನಿಂಗ್ಸ್​ನಲ್ಲಿ ಮಹತ್ವದ 292 ರನ್​ ಮುನ್ನಡೆ ದೊರೆತಿದೆ.

ಎರಡನೇ ದಿನದಂತ್ಯಕ್ಕೆ ವಿಕೆಟ್​ ನಷ್ಟವಿಲ್ಲದೆ 8 ರನ್​ ಗಳಿಸಿದ್ದ ಆಸ್ಟ್ರೇಲಿಯಾ ತಂಡದ ಮೂರನೇ ದಿನ ಮೊದಲ ಎರಡು ಅವಧಿಗಳಲ್ಲೇ ಎಲ್ಲಾ ವಿಕೆಟ್​ ಕಳೆದುಕೊಂಡು ಆಲೌಟಾಯಿತು. ಆಸ್ಟ್ರೇಲಿಯಾ ತಂಡ 66.5 ಓವರ್​ಗಳಲ್ಲಿ 151 ರನ್​ಗೆ ಆಲೌಟಾಯಿತು.

ಆಸ್ಟ್ರೇಲಿಯಾ ಪರ ಟಿಮ್​ ಪೈನೆ ಮತ್ತು ಮಾರ್ಕಸ್​ ಹ್ಯಾರಿಸ್​ ತಲಾ 22 ರನ್​ ಗಳಿಸಿದರು. ಉಳಿದಂತೆ ಉಸ್ಮಾನ್​ ಖವಾಜಾ (21) ಮತ್ತು ಟ್ರಾವಿಸ್​ ಹೆಡ್​ (20) ರನ್​ ಗಳಿಸಿದರು.

ಭಾರತದ ಪರ ಬುಮ್ರಾ 6 ವಿಕೆಟ್​ ಪಡೆದರೆ ರವೀಂದ್ರ ಜಡೇಜಾ 45 ಕ್ಕೆ 2, ಇಶಾಂತ್​ ಶರ್ಮಾ ಮತ್ತು ಮೊಹಮ್ಮದ್​ ಶಮಿ ತಲಾ 1 ವಿಕೆಟ್​ ಪಡೆದರು.

ಈ ಮೂಲಕ ಬುಮ್ರಾ ಮತ್ತೊಂದು ದಾಖಲೆ ನಿರ್ಮಿಸಿದ್ದು, ಒಂದೇ ಕ್ಯಾಲೆಂಡರ್​ ವರ್ಷದಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾದ ವಿರುದ್ಧ ಅವರದ್ದೇ ನೆಲದಲ್ಲಿ ಐದು ವಿಕೆಟ್​ ಪಡೆದ ಏಷ್ಯಾದ ಮೊದಲ ಬೌಲರ್​ ಎಂಬ ಗೌರವಕ್ಕೆ ಪಾತ್ರರಾದರು. ಬುಮ್ರಾ ಜೊಹಾನ್ಸ್​ಬರ್ಗ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 54ಕ್ಕೆ5, ಟ್ರೆಂಟ್​ ಬ್ರಿಡ್ಜ್​ನಲ್ಲಿ ಇಂಗ್ಲೆಂಡ್​ ವಿರುದ್ಧ 85 ಕ್ಕೆ5 ಮತ್ತು ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 33 ಕ್ಕೆ 6 ವಿಕೆಟ್​ ಪಡೆದಿದ್ದಾರೆ. (ಏಜೆನ್ಸೀಸ್​)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....