ಆಫ್ಘನ್ ವಿರುದ್ಧದ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಅಜಿಂಕ್ಯ ರಹಾನೆ ಸಾರಥಿ

ಬೆಂಗಳೂರು: ಅಫ್ಘಾನಿಸ್ತಾನ ವಿರುದ್ಧದ ಐತಿಹಾಸಿಕ ಏಕದಿನ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿ ಘೋಷಿಸಿದ್ದು, ವಿರಾಟ್‌ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಟೀಮ್‌ ಇಂಡಿಯಾವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.

ಜೂ.14ರಿಂದ ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಟೆಸ್ಟ್‌ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಾಯಕನಾಗಿ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಬಿಸಿಸಿಐನ ಅಮಿತಾಬ್‌ ಚೌಧರಿ ತಿಳಿಸಿದ್ದಾರೆ.

ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಇದೇ ಮೊದಲ ಬಾರಿ ಇಂಗ್ಲೆಂಡ್‌ನಲ್ಲಿ ಕೌಂಟಿ ಕ್ರಿಕೆಟ್‌ ಆಡಲು ತೆರಳುತ್ತಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದರಿಂದಾಗಿ ರಹಾನೆ ಅವರನ್ನು ಅವರ ಅನುಪಸ್ಥಿತಿಯಲ್ಲಿ ನಾಯಕನ್ನಾಗಿ ನಿಯೋಜಿಸಲಾಗಿದೆ.

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ನ ಲೋಕೇಶ್‌ ರಾಹುಲ್‌ ಮತ್ತು ಕರುಣ್‌ ನಾಯರ್‌ ಟೆಸ್ಟ್‌ ಕ್ರಿಕೆಟ್‌ಗೆ ಮರಳಲಿದ್ದಾರೆ. ಮುಂಬೈ ಇಂಡಿಯನ್ಸ್‌ನ ತಂಡದ ನಾಯಕ ರೋಹಿತ್‌ ಶರ್ಮಾ ತಂಡದಿಂದ ಹೊರಗುಳಿಯಲಿದ್ದು, ವಿಶ್ರಾಂತಿ ಪಡೆಯಲಿದ್ದಾರೆ.

ಇದಲ್ಲದೆ ಐರ್ಲೆಂಡ್ ವಿರುದ್ಧದ ಟ್ವೆಂಟಿ -20 ಎರಡು ಪಂದ್ಯಗಳ ಸರಣಿಗೆ ಅದೇ ತಂಡವನ್ನು ಬಿಸಿಸಿಐ ಘೋಷಿಸಿದ್ದು, ಇಂಗ್ಲೆಂಡ್ ವಿರುದ್ಧದ ಮೂರು ಟ್ವೆಂಟಿ -20 ಪಂದ್ಯಗಳಲ್ಲಿ ಕೊಹ್ಲಿ ಭಾರತದ ನಾಯಕತ್ವ ವಹಿಸಲಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಟೆಸ್ಟ್‌ ಪಂದ್ಯ

ಅಜಿಂಕ್ಯ ರಹಾನೆ (ನಾಯಕ), ಶಿಖರ್ ಧವನ್, ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಕರುಣ್‌ ನಾಯರ್‌, ವೃದ್ಧಿಮಾನ್ ಸಾಹ(ವಿಕೆಟ್‌ ಕೀಪರ್‌), ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಶಾರ್ದೂಲ್ ಠಾಕೂರ್.

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟ್ವೆಂಟಿ-20 ಸರಣಿ

ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸುರೇಶ್ ರೈನಾ, ಮನಿಶ್‌ ಪಾಂಡೆ, ಮಹೇಂದ್ರ ಸಿಂಗ್ ಧೋನಿ(ವಿಕೆಟ್‌ ಕೀಪರ್‌), ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್.

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ

ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್‌ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಅಂಬಟಿ ರಾಯುಡು, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್.

Leave a Reply

Your email address will not be published. Required fields are marked *