More

    ಏಷ್ಯನ್ ಗೇಮ್ಸ್; ಜಪಾನ್ ಮಣಿಸಿ ಚಿನ್ನ ಗೆದ್ದ ಭಾರತ ಹಾಕಿ ತಂಡ

    ನವದೆಹಲಿ: ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ, ಹಾಲಿ ಚಾಂಪಿಯನ್​ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

    ಭಾರತದ ಪರ ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ಮತ್ತು ರೋಹಿದಾಸ್ ಅಮಿತ್ ಗೋಲು ಗಳಿಸುವ ಮೂಲಕ ಜಪಾನ್‌ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

    ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡ 2024ರಲ್ಲಿ ನಡೆಯಲ್ಲಿರುವ ಪ್ಯಾರಿಸ್​ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಸಹ ಖಚಿತಪಡಿಸಿಕೊಂಡಿದೆ. ಈ ಮೂಲಕ ಭಾರತವು ಏಷ್ಯನ್ ಗೇಮ್ಸ್​ನಲ್ಲಿ 100 ಪದಕಗಳ ಹಡಿಯನ್ನು ತಲುಪುವುದು ಬಹುತೇಕ ಖಚಿತವಾಗಿದ್ದು, ಇದೇ ಮೊದಲ ಬಾರಿಗೆ ಈ ಸಾಧನೆ ಮಾಡಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts