

ಲಾಹೋರ್: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ (Champions Trophy) ಶುರುವಾಗುವುದಕ್ಕೆ ತಿಂಗಳುಗಳು ಬಾಕಿ ಉಳಿದಿದ್ದು, ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಭಾರತ (India) ಹಾಗೂ ಪಾಕಿಸ್ತಾನ (Pakistan) ನಡುವಿನ ಕಿತ್ತಾಟಕ್ಕೆ ಟೂರ್ನಿ ಆರಂಭಕ್ಕೂ ಮುಂಚಿನಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದು, ಭಾರತ (India) ಮಾತ್ರ ಹೈಬ್ರಿಡ್ ಮಾದರಿಯಲ್ಲಿ (Hybrid Model) ನಡೆಸಿದರೆ ಮಾತ್ರ ಟೂರ್ನಿಯಲ್ಲಿ ಭಾಗಿಯಾಗುವುದಾಗಿ ಹೇಳಿದೆ. ಆದರೆ, ಪಾಕಿಸ್ತಾನ (Pakistan) ಮಾತ್ರ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ (Hybrid Model) ನಡೆಸುವುದಿಲ್ಲ ಎಂದು ಹೇಳಿದ್ದು, ಐಸಿಸಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳುವ ಮೂಲಕ ಅಡ್ಡಗೋಡೆ ಮೇಲೆ ದೀಪವಿಟ್ಟಿದೆ.
ಭಾರತ ತನ್ನ ದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ (Champions Trophy) ಆಡುತ್ತದೆ ಎಂಬ ಮಹಾದಾಸೆಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (Pakistan Cricket Board) ಆರ್ಥಿಕ ಸಂಕಷ್ಟದ ನಡುವೆಯೂ ಲಾಹೋರ್ನಲ್ಲಿರುವ ಗಡಾಫಿ ಕ್ರೀಡಾಂಗಣವನ್ನು (Lahore Gadaffi Stadium) ನವೀಕರಣಗೊಳಿಸುತ್ತಿದ್ದು, ಆರ್ಥಿಕ ಸಂಪನ್ಮೂಲದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಒಂದು ವೇಳೆ ಭಾರತ ಪಾಕಿಸ್ತಾನದಲ್ಲಿ ಆಡಿದರೆ ಆರ್ಥಿಕ ಮಾತ್ರವಲ್ಲದೇ ಉಭಯ ದೇಶಗಳ ನಡುವಿನ ಸಂಬಂಧಗಳ (Bi Lateral Relations) ಮಾತುಕತೆಗೆ ಪುನರ್ಜೀವನ ಸಿಗುತ್ತದೆ ಎಂಬ ಆಶಾಭಾವನೆಯಲ್ಲಿದೆ. ಆದರೆ, ಭಾರತ (India) ಮಾತ್ರ ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದು, ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ (Hybrid Model) ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಪಟ್ಟು ಹಿಡಿದಿದೆ.
ಭಾರತ ತಂಡವು (Team India) ಪಾಕಿಸ್ತಾನಕ್ಕೆ (Pakistan) ತೆರಳದಿರಲು ಮುಖ್ಯ ಕಾರಣ ಭದ್ರತಾ ಕಾಳಜಿ (Security Reasons). ಅದರಲ್ಲೂ ಪಾಕ್ನಲ್ಲಿ ಟೀಮ್ ಇಂಡಿಯಾ (Team India) ಆಟಗಾರರಿಗೆ ಸಂಪೂರ್ಣ ಸುರಕ್ಷತೆ ಸಿಗುವ ಬಗ್ಗೆ ಖಾತ್ರಿಯಿಲ್ಲ. ಇತ್ತ ಭಾರತದ ಹಠಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (Pakistan Cricket Board) ಸ್ವಲ್ಪ ಮಣಿದಂತೆ ಕಾಣುತ್ತಿದ್ದು, ಉಪಾಯ ಒಂದನ್ನು ಕಂಡು ಹಿಡಿದಿದೆ. ಈ ಕುರಿತು ಪತ್ರ ಒಂದನ್ನು ಬರೆದಿದ್ದು, ಅದರಲ್ಲಿ ಉಲ್ಲೇಖಿಸಿರುವ ಅಂಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅದೇನೆಂದರೆ ಭಾರತ ತಂಡವು (Team India) ಪಾಕಿಸ್ತಾನದಲ್ಲಿ (Pakistan) ಉಳಿದುಕೊಳ್ಳುವ ಅವಶ್ಯಕತೆಯಿಲ್ಲ. ಅಂದರೆ ಭಾರತದ ಪಂದ್ಯ ನಡೆಯುವ ದಿನ ಟೀಮ್ ಇಂಡಿಯಾ (Team India) ಪಾಕಿಸ್ತಾನಕ್ಕೆ ತೆರಳಿ ಮ್ಯಾಚ್ ಮುಗಿದ ಬಳಿಕ ಭಾರತಕ್ಕೆ ಹಿಂತಿರುಗಬಹುದು. ಇದಕ್ಕಾಗಿ ಭಾರತ ತಂಡದ ಪಂದ್ಯಗಳನ್ನು ಲಾಹೋರ್ನಲ್ಲಿ (Lahore) ಆಯೋಜಿಸಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ. ಏಕೆಂದರೆ ಲಾಹೋರ್ ನಗರವು ಭಾರತದ ಗಡಿಗೆ (India Border) ಹತ್ತಿರದಲ್ಲಿದೆ. ಅದರಲ್ಲೂ ಪಂಜಾಬ್ನ ಚಂಡೀಗಢ ಹಾಗೂ ಲಾಹೋರ್ ನಡುವಣ ದೂರ ಕೇವಲ 246 ಕಿಲೋಮೀಟರ್ಗಳು ಮಾತ್ರ. ಅಲ್ಲದೇ ಲಾಹೋರ್ ಹಾಗೂ ಚಂಡೀಗಢ ನಗರಗಳಲ್ಲಿ ವಿಮಾನ ನಿಲ್ದಾಣಗಳಿವೆ (Airport). ಮ್ಯಾಚ್ ಮುಗಿದ ಬಳಿಕ ಚಂಡೀಗಢ ಅಥವಾ ದೆಹಲಿಗೆ ತೆರಳಬಹುದು ಎಂದು ಹೇಳಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಈ ಐಡಿಯಾಗೆ ಬಿಸಿಸಿಐ (BCCI) ಮಣೆ ಹಾಕಲಿದೆಯಾ ಎಂದು ಕಾದು ನೋಡಬೇಕಿದೆ. ಏಕೆಂದರೆ ಈ ಹಿಂದೆ ಬಿಸಿಸಿಐ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಬೇಕೆಂಬ ಬೇಡಿಕೆಯಿಟ್ಟಿದೆ. ಇದಲ್ಲದೆ ಐಸಿಸಿ ಕೂಡ ಬಿಸಿಸಿಐ ಪರ ಒಲವು ವ್ಯಕ್ತಪಡಿಸುತ್ತಿದ್ದು, ಅಂತಿಮವಾಗಿ ಏನಾಗುತ್ತದೆ ಎಂದು ಮುಂದಿನ ಕೆಲ ದಿನಗಳವರೆಗೆ ಮಾದು ನೋಡಬೇಕಿದೆ.
ಭಾರತ ತಂಡ ಚಾಂಪಿಯನ್ಸ್ ಟ್ರೋಫಿ (Champions Trophy) ಆಡಲು ಪಾಕಿಸ್ತಾನಕ್ಕೆ (Pakistan) ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ (Team India) ಇರುವ ಕ್ರೇಜ್ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ (Pakistan) ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೇ, ಉಭಯ ದೇಶಗಳ ನಡುವಿನ ಸಂಬಂಧವೂ (Bi Lateral Relationship) ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ ನಿರೀಕ್ಷೆಗೆ ಬಿಸಿಸಿಐ ಆಘಾತ ನೀಡಿದ್ದು, ಬಹುತೇಕ ಟೀಮ್ ಇಂಡಿಯಾ (Team India) ಪಾಕಿಸ್ತಾನ ತೆರಳುವುದು ಅನುಮಾನವಾಗಿದೆ.
ಇದಲ್ಲದೆ ಭದ್ರತೆಯ ಕಾರಣದಿಂದಾಗಿ (Secuirity Reasons) ಭಾರತದ ಪಂದ್ಯಗಳನ್ನು ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್ ಹೋಟೆಲ್ ನಿರ್ಮಿಸುವುದಾಗಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ.