ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾ ಗೆಲ್ಲಲು 289 ರನ್ ಗುರಿ ನೀಡಿದ ಆಸ್ಟ್ರೇಲಿಯ

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಐತಿಹಾಸಿಕ ಟೆಸ್ಟ್ ಸರಣಿ ವಿಜಯ ದಾಖಲಿಸಿದ ಐದು ದಿನಗಳ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆರಂಭಿಸಿದ್ದು, ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾ ಗೆಲ್ಲಲು 289 ರನ್​ಗಳ ಗುರಿ ನೀಡಿದೆ.

ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದ ಆಸ್ಟ್ರೇಲಿಯಾ ತಂಡ ನಿಗದಿತ ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 288 ರನ್‌ ಗಳಿಸಿದೆ.

ಭಾರತದ ಪರ ರವೀಂದ್ರ ಜಡೇಜಾಗೆ 1 ವಿಕೆಟ್, ಭುವನೇಶ್ವರ್, ಕುಲದೀಪ್‌ ಯಾದವ್ ತಲಾ 2 ವಿಕೆಟ್ ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ಪರ ಅಲೆಕ್ಸ್‌ 24 ರನ್‌ ಗಳಿಸಿ ಕುಲದೀಪ್‌ ಯಾದವ್‌ಗೆ ವಿಕೆಟ್‌ ಒಪ್ಪಿಸಿದರೆ, ಫಿಂಚ್‌ 6, ಉಸ್ಮಾನ್‌ 59, ಮಾರ್ಷ್‌ 54, ಪೀಟರ್‌ 73 ರನ್‌ ಗಳಿಸಿದರು. ಸ್ಟೋನಿಸ್‌ 47 ರನ್‌ ಮತ್ತು ಮ್ಯಾಕ್ಸ್‌ವೆಲ್‌ 11 ರನ್‌ ಗಳಿಸಿ ಅಜೇಯರಾಗಿ ಉಳಿದರು. (ಏಜೆನ್ಸೀಸ್)