More

  IND Vs AUS ; ಟಾಸ್ ಗೆದ್ದ ಆಸ್ಟ್ರೇಲಿಯಾ…ಟೀಂ ಇಂಡಿಯಾ ಬ್ಯಾಟಿಂಗ್

  ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಪ್ರಾರಂಭವಾಗಿದೆ.  ಆಸ್ಟ್ರೇಲಿಯಾ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

  ಇದು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಾರಂಭವಾಯಿತು.  ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.  ಮಧ್ಯಾಹ್ನ 2 ಗಂಟೆಗೆ ಮ್ಯಾಚ್ ಆರಂಭವಾಗಲಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.

  2023ರ ವಿಶ್ವಕಪ್‌ನ ಫೈನಲ್ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿದೆ.

  ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ  ಒಳಗೆ ಹಾಗೂ ಹೊರಗೆ ಎಲ್ಲಿ ನೋಡಿದರೂ ಜನವೋ ಜನ. ಭಾರತ ತಂಡಕ್ಕೆ ಬೆಂಬಲ ಸೂಚಿಸಲು ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂ ಬಳಿ ಕಿಕ್ಕಿರಿದಿದ್ದು, ನೀಲಿ ಸಮುದ್ರದಂತೆ ಗೋಚರಿಸುತ್ತಿದೆ.

  ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

  ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts