More

    ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಮೊದಲೆರಡು ಪಂದ್ಯಗಳಿಗೆ ರಾಹುಲ್​ ನಾಯಕ

    ನವದೆಹಲಿ: ಏಷ್ಯಾ ಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ದಾಖಲೆಯ ಜಯ ಸಾಧಿಸುವ ಮೂಲಕ ಟ್ರೋಫಿಯನ್ನು ಮುಡಿಗೇರಿಸಿಕೊಂಡ ಭಾರತ ಇದೀಗ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಸಜ್ಜಾಗಿದೆ. ಸೆ. 22 ರಿಂದ ಆರಂಭವಾಗುವ ಪಂದ್ಯಗಳಿಗೆ ಟೀಮ್​ ಇಂಡಿಯಾ ತಂಡವನ್ನು ಬಿಸಿಸಿಐ ಇಂದು (ಸೆ.18) ಪ್ರಕಟಿಸಿದೆ.

    ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ಎರಡು ಸೆಟ್ ತಂಡಗಳನ್ನು ಬಿಡುಗಡೆ ಮಾಡಿದೆ. ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಕೆ.ಎಲ್​. ರಾಹುಲ್ ಟೀಮ್​ ಇಂಡಿಯಾವನ್ನು​ ಮುನ್ನಡೆಸಲಿದ್ದಾರೆ. ಕೊನೆಯ ಅಥವಾ ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್​ ಶರ್ಮ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

    ಆರ್​. ಅಶ್ವಿನ್​, ಏಕದಿನ ಮಾದರಿ ಪಂದ್ಯಕ್ಕೆ ಮರಳಿದ್ದಾರೆ. 2022ರಿಂದ ಇದೇ ಮೊದಲೇ ಬಾರಿಗೆ ಅಶ್ವಿನ್​ ಏಕದಿನ ಪಂದ್ಯಗಳಲ್ಲಿ ಆಡಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳಲ್ಲಿ ಅಶ್ವಿನ್​ ಕಣಕ್ಕೆ ಇಳಿಯಲಿದ್ದಾರೆ. ಈ ಸರಣಿಯಲ್ಲಿ ಭಾರತ ತನ್ನ ವಿಶ್ವಕಪ್ ತಂಡವನ್ನು ಅಂತಿಮ ಏಕದಿನ ಪಂದ್ಯಕ್ಕೆ ಬಳಸಿಕೊಳ್ಳಲಿದ್ದು, ರೋಹಿತ್ ಶರ್ಮಾ ನಾಯಕನಾಗಿ ತಂಡಕ್ಕೆ ಮರಳಲಿದ್ದಾರೆ.

    ಅಕ್ಸರ್ ಪಟೇಲ್ ಗಾಯದ ಸಮಸ್ಯೆಯ ಬಳಿಕ ಶ್ರೀಲಂಕಾ ವಿರುದ್ಧ ಏಷ್ಯಾಕಪ್ ಫೈನಲ್‌ಗೆ ಆಯ್ಕೆಯಾದ ವಾಷಿಂಗ್ಟನ್ ಸುಂದರ್, ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ತಂಡದಲ್ಲಿ ಇರುತ್ತಾರೆ. ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮುಂತಾದವರು ವಿಶ್ರಾಂತಿ ಪಡೆದಿರುವ ಕಾರಣ ರವೀಂದ್ರ ಜಡೇಜಾ ಅವರು ರಾಹುಲ್‌ಗೆ ಉಪನಾಯಕರಾಗಿದ್ದಾರೆ. ಕುಲದೀಪ್​ ಯಾದವ್​ಗೂ ಮೊದಲೆರೆಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ.

    ಇದನ್ನೂ ಓದಿ: CWMA ಆದೇಶ ವಿಚಾರ; ತಮಿಳುನಾಡಿನ ರಾಜಕಾರಣಿಗಳಲ್ಲಿ ಇರುವ ಒಗ್ಗಟ್ಟು ನಮ್ಮವರಲಿಲ್ಲ: ಎಚ್​.ಡಿ. ದೇವೇಗೌಡ

    ಮೊದಲೆರಡು ಏಕದಿನ ಪಂದ್ಯಗಳಿಗೆ ಭಾರತ ತಂಡ

    ಕೆ.ಎಲ್. ರಾಹುಲ್ (ನಾಯಕ ಮತ್ತು ವಿಕೆಟ್​ ಕೀಪರ್​), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ.

    ಕೊನೆಯ ಅಥವಾ 3ನೇ ಪಂದ್ಯಕ್ಕೆ ಭಾರತ ತಂಡ

    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

    ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳು ಕ್ರಮವಾಗಿ ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನಲ್ಲಿ ಸೆಪ್ಟೆಂಬರ್ 22, 24 ಮತ್ತು 27 ರಂದು ನಡೆಯಲಿವೆ. (ಏಜೆನ್ಸೀಸ್​)

    ಮೆಗಾಸ್ಟಾರ್​ ಮುಂದಿನ​ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ!

    ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ರಾಜ್ಯದ ಹೊಯ್ಸಳ ದೇವಾಲಯಗಳು: ಪ್ರಧಾನಿ ಸಂತಸ

    ಭಾರತದ ಈ ಗ್ರಾಮದಲ್ಲಿ ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿ ಎನಿಸಿದರೂ ಇದು ಸತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts