3ನೇ ಟೆಸ್ಟ್​ಗೆ ಪೃಥ್ವಿ ಷಾ ಫಿಟ್?

ಅಡಿಲೇಡ್: ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡು ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿರುವ ಯುವ ಬ್ಯಾಟ್ಸ್​ಮನ್ ಪೃಥ್ವಿ ಷಾ ಬಾಕ್ಸಿಂಗ್ ಡೇ ಟೆಸ್ಟ್​ಗೆ ಮರಳುವ ನಿರೀಕ್ಷೆಯಿದೆ. ಪೃಥ್ವಿ ಸಂಪೂರ್ಣ ಫಿಟ್ ಆಗುವ ಮೂಲಕ ಮೆಲ್ಬೋರ್ನ್ ನಲ್ಲಿ ನಡೆಯಲಿರುವ 3ನೇ ಟೆಸ್ಟ್ ಸಾಧ್ಯತೆಯಿದೆ ಎಂದು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಇದರಿಂದ ಪೃಥ್ವಿ ಪರ್ತ್​ನಲ್ಲಿ ನಡೆಯಲಿರುವ 2ನೇ ಪಂದ್ಯಕ್ಕೂ ಲಭ್ಯರಾಗುವ ಸಾಧ್ಯತೆ ಕಡಿಮೆಯಾಗಿದೆ.