More

    ವಿಶ್ವಕಪ್​ ಫೈನಲ್​: ಟೀಮ್​ ಇಂಡಿಯಾಗೆ ಆರಂಭಿಕ ಆಘಾತ, 4 ರನ್​ಗೆ ಶುಭಮಾನ್​ ಗಿಲ್​ ಔಟ್​

    ಅಹಮದಾಬಾದ್​: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್​ ಟೂರ್ನಿಯ ರಣ ರೋಚಕ ಫೈನಲ್​ ಕದನದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿರುವ ಭಾರತ 30 ರನ್​ಗೆ ಒಂದು ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ.

    ಕೇವಲ 4 ರನ್​ ಗಳಿಸಿದ ಗಿಲ್​ ಮಿಚೆಲ್​ ಸ್ಟಾರ್ಕ್​ ಓವರ್​ನಲ್ಲಿ ಆ್ಯಡಂ ಜಂಪಾಗೆ ಕ್ಯಾಚಿತ್ತು ನಿರ್ಗಮಿಸಿದರು. ಸದ್ಯ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿ ಕ್ರೀಸ್​ನಲ್ಲಿದ್ದಾರೆ. 7 ಓವರ್​ ಮುಕ್ತಾಯಕ್ಕೆ ಭಾರತ 1 ವಿಕೆಟ್​ ನಷ್ಟಕ್ಕೆ 54 ರನ್​ ಕಲೆಹಾಕಿದೆ. ರೋಹಿತ್​ 33 ಮತ್ತು ವಿರಾಟ್​ ಕೊಹ್ಲಿ 16 ರನ್​ ಗಳಿಸಿ ಉತ್ತಮ ಜತೆಯಾಟದ ಸುಳಿವು ನೀಡಿದ್ದಾರೆ.

    ಅಂದಹಾಗೆ ಏಕದಿನ ವಿಶ್ವಕಪ್‌ ಇತಿಹಾದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್​ನಲ್ಲಿ ಮುಖಾಮುಖಿಯಾಗಿರುವುದು ಇದು ಎರಡನೇ ಬಾರಿ. 2003ರ ವಿಶ್ವಕಪ್‌ನಲ್ಲಿ ಮೊದಲ ಬಾರಿ ಮುಖಾಮುಖಿಯಾಗಿದ್ದವು. ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಸೌರವ್ ಗಂಗೂಲಿ ನಾಯಕತ್ವದ ಭಾರತವನ್ನು ಸೋಲಿಸಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ವಿಶ್ವಕಪ್‌ನಲ್ಲಿ ಭಾರತ ಫೈನಲ್‌ ಪ್ರವೇಶಿಸಿರುವುದು ಇದು ನಾಲ್ಕನೇ ಬಾರಿ. 1983, 2003 ಮತ್ತು 2011 ರಲ್ಲಿ ಫೈನಲ್ ತಲುಪಿದೆ ಮತ್ತು 1983 ಮತ್ತು 2011 ರಲ್ಲಿ ಪ್ರಶಸ್ತಿಯನ್ನು ಗೆದ್ದಿದೆ.

    ಭಾರತ ಪ್ರಸಕ್ತ ವಿಶ್ವಕಪ್​ ಟೂರ್ನಿಯಲ್ಲಿ ಲೀಗ್​ ಹಂತದಲ್ಲಿ 9 ಮತ್ತು ಒಂದು ಸೆಮಿಫೈನಲ್​ ಸೇರಿ ಆಡಿದ 10 ಪಂದ್ಯಗಳಲ್ಲೂ ಜಯ ಸಾಧಿಸಿದೆ. ಪ್ರತಿಯಾಗಿ ಆಸ್ಟ್ರೇಲಿಯಾ ತಂಡ 10 ಪಂದ್ಯಗಳಲ್ಲಿ ಎರಡರಲ್ಲಿ ಸೋತು ಉಳಿದ ಎಂಟು ಪಂದ್ಯಗಳಲ್ಲಿ ಜಯಸಿದೆ. ಅ.8ರಂದು ಚೆನ್ನೈ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತು. ಇದೀಗ ಗುಜರಾತಿನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟ್ರೋಫಿಗಾಗಿ ಎರಡೂ ತಂಡಗಳು ಕಾದಾಡುತ್ತಿವೆ. ಪ್ರಸ್ತುತ ರೋಹಿತ್​ ಮತ್ತು ಕೊಹ್ಲಿ ಕ್ರೀಸ್​ನಲ್ಲಿದ್ದಾರೆ.

    ಈ ಪಂದ್ಯವನ್ನು ಗೆಲ್ಲುವ ತಂಡ ವಿಶ್ವಕಪ್​ ಟ್ರೋಫಿಯ ಜತೆಗೆ 4 ಮಿಲಿಯನ್​ ಡಾಲರ್ (33,30,89,400 ರೂಪಾಯಿ) ಬಹುಮಾನ ಮೊತ್ತವನ್ನು ಪಡೆಯಲಿದೆ. ರನ್ನರ್​ ಅಪ್​ ತಂಡಗಳು 2 ಮಿಲಿಯನ್​ ಡಾಲರ್​ ಬಹುಮಾನ ಮೊತ್ತ ಹಾಗೂ ಲೀಗ್​ ಹಂತದಲ್ಲಿ ವಿಜೇತರಾದ ಪ್ರತಿ ತಂಡಕ್ಕೆ ತಲಾ 40 ಸಾವಿರ ಡಾಲರ್​ ಬಹುಮಾನ ಮೊತ್ತವನ್ನು ಪಡೆಯಲಿವೆ. (ಏಜೆನ್ಸೀಸ್​)

    ಶಮಿ ಸುಮ್ಮನಿದ್ರೂ ಬಿಡದ ಹಸಿನಾ! ಒಳ್ಳೆ ಆಟವಾಡಿದ್ರೆ ಸಾಲದು… ಮಾಜಿ ಗಂಡನಿಗೆ ಹಿಗ್ಗಾಮುಗ್ಗಾ ಕ್ಲಾಸ್​

    2ನೇ ಹೆಂಡ್ತಿಯಾಗಲು ರೆಡಿ ಎಂದ ನಟಿಗೆ ಶಮಿಯ ಮಾಜಿ ಪತ್ನಿ ಹಸೀನಾ ಕೊಟ್ಟ ಉತ್ತರವಿದು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts