25.7 C
Bangalore
Sunday, December 15, 2019

ಮಯಾಂಕ್​ 2ನೇ ದ್ವಿಶತಕ: 2ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾ ವಿರುದ್ಧ 343 ರನ್​ ಮುನ್ನಡೆ ಸಾಧಿಸಿದ ಭಾರತ!

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಇಂದೋರ್​: ಕನ್ನಡಿಗ ಮಯಾಂಕ್​ ಅಗರ್​ವಾಲ್ ಸಿಡಿಸಿದ 2ನೇ ಡಬಲ್​ ಸೆಂಚುರಿ ನೆರವಿನಿಂದ ಟೀಮ್​ ಇಂಡಿಯಾ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲನೇ ಟೆಸ್ಟ್​ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭರ್ಜರಿ ಮೊತ್ತ ಕಲೆಹಾಕಿದೆ. ಈ ಮೂಲಕ ಮೊದಲ ಟೆಸ್ಟ್​ನಲ್ಲಿ ವಿಜಯೋತ್ಸವ ಆಚರಿಸುವ ಕಡೆಗೆ ಹೆಜ್ಜೆ ಹಾಕಿದೆ.

ಗುರುವಾರ ಆರಂಭವಾದ ಟೆಸ್ಟ್​ ಸರಣಿಯ ಮೊದಲನೇ ಟೆಸ್ಟ್​ನಲ್ಲಿ ಬ್ಯಾಟಿಂಗ್​ ಆರಂಭಿಸಿದ ಬಾಂಗ್ಲಾ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​ಗಳಿಗೆ ಸರ್ವಪತನ ಕಂಡಿತು. ಗುರಿ ಬೆನ್ನತ್ತಿದ ಭಾರತ ಮೊದಲ ದಿನದ ಅಂತ್ಯಕ್ಕೆ ರೋಹಿತ್​ ಶರ್ಮಾ(6) ವಿಕೆಟ್​ ಕಳೆದುಕೊಂಡು 86 ರನ್​ ಗಳಿಸಿತ್ತು. ಮಯಾಂಕ್​ ಅಗರ್​ವಾಲ್​(37) ಹಾಗೂ ಚೇತೇಶ್ವರ ಪೂಜಾರ(43) ರನ್​ ಗಳಿಸಿ ಕ್ರೀಸ್​ನಲ್ಲಿದ್ದರು.

ಎರಡನೇ ದಿನ ಬ್ಯಾಟಿಂಗ್​ ಮುಂದುವರಿಸಿದ ಭಾರತ ಮಯಾಂಕ್ ಅಗರ್​ವಾಲ್​(243 ರನ್​, 330 ಬಾಲ್​, 28 ಬೌಂಡಿ, 8 ಸಿ​ಕ್ಸರ್​) ಅವರ ದ್ವಿಶತಕದ ನೆರವಿನಿಂದ ಭರ್ಜರಿ ಮೊತ್ತ ಕಲೆಹಾಕಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 114 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 493 ರನ್​ ಗಳಿಸಿ ಮೂರನೇ ದಿನದಾಟ ಕಾಯ್ದುಕೊಂಡಿದೆ. ಬಾಂಗ್ಲಾ ನೀಡಿದ್ದ 150 ರನ್​ ಗುರಿಯನ್ನು ದಾಟಿ ಭಾರತ 343 ರನ್​ಗಳ ಮುನ್ನಡೆ ಸಾಧಿಸಿದೆ.

ಎರಡನೇ ದಿನದಾಟದಲ್ಲಿ ಚೇತೇಶ್ವರ ಪೂಜಾರ(54), ವಿರಾಟ್​ ಕೊಹ್ಲಿ(0), ಅಜಿಂಕ್ಯಾ ರಹಾನೆ(86) ಹಾಗೂ ವೃದ್ಧಿಮಾನ್​ ಸಹಾ(12) ರನ್​ ಗಳಿಸಿ ಔಟಾಗಿದ್ದಾರೆ. ರವೀಂದ್ರ ಜಡೇಜಾ (60) ಹಾಗೂ ಉಮೇಶ್​ ಯಾದವ್​(25) ರನ್​ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

ಬಾಂಗ್ಲಾ ಪರ ಅಬು ಜಯೇದ್​ 4 ವಿಕೆಟ್​ ಕಬಳಿಸಿದರೆ, ಎಬಾದ್​ ಹೊಸೈನ್​ ಮ್ತತು ಮಹಿದೆ ಹಸನ್​ ತಲಾ ಒಂದು ವಿಕೆಟ್​ ಪಡೆದುಕೊಂಡಿದ್ದಾರೆ. (ಏಜೆನ್ಸೀಸ್​)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...