20.3 C
Bangalore
Sunday, December 15, 2019

ವಿರಾಟ್​ ಕೊಹ್ಲಿ ನಾಯಕತ್ವಕ್ಕೆ ಮನಸೋತ ಇಂಗ್ಲೆಂಡ್​ ಮಾಜಿ ನಾಯಕ ಹೇಳಿದ್ದು ಹೀಗೆ…

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ನವದೆಹಲಿ: ವಿರಾಟ್​ ಕೊಹ್ಲಿ ಟೀಮ್​ ಇಂಡಿಯಾದ ನಾಯಕರಾಗಿ ಸತತ 10 ಟೆಸ್ಟ್​ ಇನ್ನಿಂಗ್ಸ್​ಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ನಾಯಕರಾಗಿ 9 ಇನ್ನಿಂಗ್ಸ್​ ಜಯ ಸಾಧಿಸಿದ್ದ ಎಂ.ಎಸ್​.ಧೋನಿ ಮತ್ತು 8 ಇನ್ನಿಂಗ್ಸ್​ ಜಯ ಸಾಧಿಸಿದ್ದ ಮೊಹಮ್ಮದ್​ ಅಜರುದ್ದೀನ್ ಅವರನ್ನು ಹಿಂದಿಕ್ಕಿದ್ದಾರೆ. ಯಶಸ್ವಿ ನಾಯಕನಾಗಿ ಮುನ್ನುಗ್ಗುತ್ತಿರುವ ಕೊಹ್ಲಿಯನ್ನು ಇಂಗ್ಲೆಂಡ್​ ತಂಡದ ಮಾಜಿ ನಾಯಕ ಮೈಕಲ್​ ವಾನ್​ ಕೊಂಡಾಡಿದ್ದಾರೆ.​

ಬಾಂಗ್ಲಾದೇಶದ ವಿರುದ್ಧ ಇಂದೋರ್​ನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ 130 ರನ್​ ಅಂತರದಿಂದ ಇನ್ನಿಂಗ್ಸ್​ ಜಯಸಾಧಿಸುವ ಮೂಲಕ ಭಾರತ 1-0 ಅಂತರದಿಂದ ಟೆಸ್ಟ್​ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಂದೋರ್​ ಟೆಸ್ಟ್​ ಜಯದ ಮೂಲಕ ತವರಿನಲ್ಲಿ ಸತತವಾಗಿ ಆರು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಧೋನಿಗೆ ಸರಿಸಮಾನಾಗಿ ಕೊಹ್ಲಿ ನಿಂತಿದ್ದಾರೆ. ಈಗಾಗಲೇ ಕೊಹ್ಲಿ ನಾಯಕತ್ವದಲ್ಲಿ 52 ಪಂದ್ಯಗಳಲ್ಲಿ ಬರೋಬ್ಬರಿ 32 ಪಂದ್ಯಗಳಲ್ಲಿ ಭಾರತ ಜಯಿಸಿದೆ. ಇಂದೋರ್​ ಟೆಸ್ಟ್​ನಲ್ಲಿ ಕೊಹ್ಲಿ ಬ್ಯಾಟಿಂಗ್​ನಲ್ಲಿ ಸದ್ದು ಮಾಡದಿದ್ದರೂ ನಾಯಕತ್ವ ವಿಚಾರವಾಗಿ ಸುದ್ದಿಯಾಗಿದ್ದಾರೆ. ಹೀಗಾಗಿ ಜಾಲತಾಣದಲ್ಲೂ ತುಂಬಾ ಪ್ರಶಂಸೆಗಳು ಹರಿದುಬರುತ್ತಿವೆ.

ಇಂಗ್ಲೆಂಡ್​ ತಂಡದ ಮಾಜಿ ನಾಯಕ ಮೈಕಲ್​ ವಾನ್​, ಕೊಹ್ಲಿ ನಾಯಕತ್ವಕ್ಕೆ ಮನಸೋತು ಟ್ವೀಟ್​ ಮೂಲಕ “ವಿರಾಟ್​ ಕೊಹ್ಲಿ ಅತಿ ವೇಗವಾಗಿ ಭಾರತದ ಅತ್ಯುತ್ತಮ ನಾಯಕರಾಗಬೇಕೆಂದು” ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್​ ಪಂದ್ಯ ನವೆಂಬರ್​ 22ರಿಂದ ಕೊಲ್ಕತಾದ ಈಡನ್​ ಗಾರ್ಡನ್​ನಲ್ಲಿ ನಡೆಯಲಿದೆ. ಉಭಯ ತಂಡಗಳು ಮೊದಲ ಬಾರಿಗೆ ಹಗಲು-ರಾತ್ರಿಯ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯದ ಅನುಭವವನ್ನು ಹೊಂದಲಿವೆ. ಈಗಾಗಲೇ ಉಭಯ ತಂಡಗಳು ಅಭ್ಯಾಸದಲ್ಲಿ ಬಿಜಿಯಾಗಿವೆ. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...