18.5 C
Bangalore
Monday, December 16, 2019

ಇಂದು ಭಾರತ-ಇಂಗ್ಲೆಂಡ್ ಫೈನಲ್

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಲೀಡ್ಸ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯ ಮಂಗಳವಾರ ಲೀಡ್ಸ್​ನ ಹೆಡಿಂಗ್ಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ತಲಾ ಒಂದು ಪಂದ್ಯ ಜಯಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಸತತ 10ನೇ ಏಕದಿನ ಸರಣಿ ಗೆಲ್ಲುವ ಗುರಿಯಲ್ಲಿರುವ ಭಾರತ ತಂಡ ಐದು ಪಂದ್ಯಗಳ ಕಠಿಣ ಟೆಸ್ಟ್ ಸರಣಿಗೂ ಮುನ್ನ ಆತ್ಮವಿಶ್ವಾಸ ವೃದ್ಧಿಸಿಕೊಳ್ಳುವ ಹಂಬಲದಲ್ಲಿದೆ. ಲಾರ್ಡ್ಸ್​ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದಾಗಿ 86 ರನ್​ಗಳಿಂದ ಸೋತಿದ್ದ ಭಾರತಕ್ಕೆ ಎಚ್ಚರಿಕೆ ಆಟದ ಅಗತ್ಯವಿದೆ.

ಭಾರತದ ರಿಸ್ಟ್ ಸ್ಪಿನ್ ಜೋಡಿ ಕುಲದೀಪ್ ಹಾಗೂ ಚಾಹಲ್ ಆತಿಥೇಯ ತಂಡದ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ. ಎರಡೂ ಪಂದ್ಯಗಳಲ್ಲಿ ಸ್ಥಾನ ಪಡೆಯಲು ವಿಫಲವಾಗಿರುವ ದಿನೇಶ್ ಕಾರ್ತಿಕ್ ಹಾಗೂ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದೆ. ರೈನಾ ಹಾಗೂ ರಾಹುಲ್ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ವಿಕೆಟ್ ಕೀಪಿಂಗ್​ಗೆ ಅನುಭವಿ ಧೋನಿ, ಮೊದಲ ಆಯ್ಕೆಯಾಗಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್ ತಂಡದಲ್ಲಿ ಬ್ಯಾಟ್ಸ್​ಮನ್ ಆಗಿ ಸ್ಥಾನ ಪಡೆಯಲಿದ್ದಾರೆ. ಉಳಿದಂತೆ ತಂಡದಲ್ಲಿ ಬದಲಾವಣೆ ನಿರೀಕ್ಷಿಸುವಂತಿಲ್ಲ. ರಿಸ್ಟ್ ಸ್ಪಿನ್ ಜೋಡಿ ಮೋಡಿ ಮಾಡುತ್ತಿದ್ದರೂ ವೇಗದ ವಿಭಾಗ ಅಷ್ಟಾಗಿ ಮಿಂಚುತ್ತಿಲ್ಲ. ಜಸ್​ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಅನುಪಸ್ಥಿತಿ ವೇಗದ ವಿಭಾಗಕ್ಕೆ ಭಾರಿ ಪೆಟ್ಟು ನೀಡಿದೆ. ಟೆಸ್ಟ್ ಹಿತದೃಷ್ಟಿಯಿಂದ ಭುವನೇಶ್ವರ್ ಕೊನೇ ಪಂದ್ಯದಲ್ಲೂ ಹೊರಗುಳಿದರೆ, ಶಾರ್ದೂಲ್ ಠಾಕೂರ್ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.-ಏಜೆನ್ಸೀಸ್

10 ಭಾರತ ತಂಡ 2016ರ ಜನವರಿಯಲ್ಲಿ ಕಡೆಯ ಬಾರಿಗೆ ದ್ವಿಪಕ್ಷೀಯ ಸರಣಿಯಲ್ಲಿ ಸೋಲು ಕಂಡಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ 1-4 ರಿಂದ ಭಾರತ ಸೋತಿತ್ತು. ಬಳಿಕ ನಡೆದ ಜಿಂಬಾಬ್ವೆ (3-0), ನ್ಯೂಜಿಲೆಂಡ್ (3-2), ಇಂಗ್ಲೆಂಡ್ (2-1), ವೆಸ್ಟ್ ಇಂಡೀಸ್ (3-1), ಶ್ರೀಲಂಕಾ (5-0), ಆಸ್ಟ್ರೇಲಿಯಾ (4-1), ನ್ಯೂಜಿಲೆಂಡ್ (2-1), ಶ್ರೀಲಂಕಾ (2-1), ದಕ್ಷಿಣ ಆಫ್ರಿಕಾ (5-1) ವಿರುದ್ಧ ಜಯ ದಾಖಲಿಸಿದೆ. ಈ ನಡುವೆ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕ್ ತಂಡಕ್ಕೆ ಶರಣಾಗಿತ್ತು.

ಇಂಗ್ಲೆಂಡ್​ಗೂ ಸರಣಿ ಗೆಲುವಿನ ಗುರಿ

ಆಸ್ಟ್ರೇಲಿಯಾ ತಂಡವನ್ನು ತವರಿನಲ್ಲಿ ನೀರು ಕುಡಿದಷ್ಟೇ ಸುಲಭವಾಗಿ ಮಣಿಸಿದ್ದ ಆತಿಥೇಯ ಇಂಗ್ಲೆಂಡ್ ಪಾಲಿಗೆ ಭಾರತದ ಸವಾಲು ಕಠಿಣವಾಗಿದೆ. ಜೋ ರೂಟ್ ಹಾಗೂ ಮಾರ್ಗನ್ ಹೊರತುಪಡಿಸಿ ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಬರುತ್ತಿಲ್ಲ. ಆಲ್ರೌಂಡರ್ ಬೆನ್ ಸ್ಟೋಕ್ಸ್ ಸರ್ವಾಂಗೀಣ ವೈಫಲ್ಯ ಕೂಡ ತಂಡದ ನಾಯಕನಿಗೆ ತಲೆನೋವಾಗಿದೆ. ಆದಿಲ್ ರಶೀದ್ ಬೌಲಿಂಗ್ ವಿಭಾಗದಲ್ಲಿ ಮಿಂಚುತ್ತಿರುವುದು ತಂಡದ ಪಾಲಿಗೆ ಕೊಂಚ ಸಮಾಧಾನ.

ಸಂಭಾವ್ಯ ತಂಡಗಳು

ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ, ಕೆಎಲ್ ರಾಹುಲ್/ ದಿನೇಶ್ ಕಾರ್ತಿಕ್, ಎಂಎಸ್ ಧೋನಿ(ವಿಕೀ), ಸುರೇಶ್ ರೈನಾ/ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಸಿದ್ದಾರ್ಥ್ ಕೌಲ್/ಶಾರ್ದೂಲ್ ಠಾಕೂರ್, ಉಮೇಶ್ ಯಾದವ್.

ಇಂಗ್ಲೆಂಡ್: ಇವೊಯಿನ್ ಮಾರ್ಗನ್ (ನಾಯಕ), ಜೇಸನ್ ರಾಯ್, ಜಾನಿ ಬೇರ್ ಸ್ಟೋ, ಜೋಸ್ ಬಟ್ಲರ್ (ವಿ.ಕೀ), ಮೊಯಿನ್ ಅಲಿ, ಜೋ ರೂಟ್, ಲಿಯಾಮ್ ಪ್ಲಂಕೆಟ್, ಬೆನ್ ಸ್ಟೋಕ್ಸ್, ಆದಿಲ್ ರಶೀದ್, ಡೇವಿಡ್ ವಿಲ್ಲಿ, ಮಾರ್ಕ್ ವುಡ್.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...