More

    ಆಂಗ್ಲರ ವಿರುದ್ಧ ಭರ್ಜರಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್; ಬೃಹತ್​ ಮೊತ್ತದತ್ತ ಟೀಂ ಇಂಡಿಯಾ ​

    ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್​. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾರತ ಹಾಗೂ ಇಂಗ್ಲೆಂಡ್​ ನಡುವಿನ ಎರಡನೇ ಟೆಸ್ಟ್​ ಪಂದ್ಯದಲ್ಲಿ ಆರಂಭೀಕ ಯಶಸ್ವಿ ಜೈಸ್ವಾಲ್​ ಆಕರ್ಷಕ ದ್ವಿಶತಕವನ್ನು ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.

    179 ರನ್​ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಯಶಸ್ವಿ ಜೈಸ್ವಾಲ್​ ಚೊಚ್ಚಲ ದ್ವಿಶತಕವನ್ನು ಸಿಡಿಸುವ ಮೂಲಕ ಪ್ರವಾಸಿ ತಂಡದ ವಿರುದ್ಧದ ಟೆಸ್ಟ್​ ಪಂದ್ಯವನ್ನು ಸ್ಮರಣೀಯವಾಗಿರಿಸಿಕೊಂಡಿದ್ದಾರೆ.

    ಇದನ್ನೂ ಓದಿ: ನಟಿ ಪೂನಂ ಪಾಂಡೆ ನಿಧನ; ಅಂತಿಮ ಸಂಸ್ಕಾರ ನಡೆದಿದ್ದು ಎಲ್ಲಿ, ಇಲ್ಲಿದೆ ವಿವರ

    ದಿನದಾಟದ ಆರಂಭದಲ್ಲೇ ಭರ್ಜರಿ ಬ್ಯಾಟಿಂಗ್​ನೊಂದಿಗೆ ಮಿಂಚಿದ ಯುವ ದಾಂಡಿಗ 277 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 18 ಬೌಂಡರಿ ಸಹಿತ 201 ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿದ 2ನೇ ಕಿರಿಯ ಭಾರತೀಯ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿದ ಟೀಮ್ ಇಂಡಿಯಾದ ಯಾವುದೇ ಅಗ್ರ ಕ್ರಮಾಂಕದ ಬ್ಯಾಟರ್ 35 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿಲ್ಲ.

    ಯಶಸ್ವಿ ಜೈಸ್ವಾಲ್ ದ್ವಿಶತಕದ ನೆರವಿನಿಂದ ಭಾರತ ತಂಡವು 105 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ನಷ್ಟಕ್ಕೆ 382 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ (208) ಹಾಗೂ ಕುಲ್​ದೀಪ್​ ಯಾದವ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts