More

    ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಬ್ಯಾಟರ್​​ಗಳು; ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಶಿಖರ್ ಧವನ್

    ಆಕ್ಲೆಂಡ್: ಟಿ-20 ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ, ಇದೀಗ ಮೊದಲು ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್​​ಗೆ 307ರನ್​​ಗಳ ದೊಡ್ಡ ಮೊತ್ತದ ಟಾರ್ಗೆಟ್ ನೀಡಿದೆ. ನಾಯಕ ಶಿಖರ್ ಧವನ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಅವರ ಅರ್ಧಶತಕ ಹಾಗೂ ವಾಷಿಂಗ್ಟನ್ ಸುಂದರ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 306 ರನ್ ಗಳಿಸಿದೆ.

    ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಸಂಪೂರ್ಣ ಯುವ ಆಟಗಾರರೇ ಆಡುತ್ತಿದ್ದು, ಅನುಭವಿ ಶಿಖರ್ ಧವನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಮೊದಲ ಪಂದ್ಯದ ಮೂಲಕ ಯುವ ವೇಗಿಗಳಾದ ಉಮ್ರಾನ್ ಮಲಿಕ್ ಹಾಗೂ ಅರ್ಶ್​​ದೀಪ್​ ಸಿಂಗ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆದುಕೊಂಡರು.

    ಬಹುದಿನಗಳ ನಂತರ ಏಕದಿನ ಕ್ರಿಕೆಟ್​ನಲ್ಲಿ ಕಾಣಿಸಿಕೊಂಡಿರುವ ಶಿಖರ್ ಧವನ್ ಹೊಸ ದಾಖಲೆಯೊಂದನ್ನು ಬರೆದರು. ಇನ್ನಿಂಗ್ಸ್​ ಆರಂಭಿಸಿದ ಧವನ್, ಅರ್ಧಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಲೀಸ್ಟ್​​ ಎ ಕ್ರಿಕೆಟ್​ನಲ್ಲಿ 12,000 ರನ್ ಕಲೆ ಹಾಕಿ ದಾಖಲೆ ಬರೆದರು. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts