17.8 C
Bengaluru
Wednesday, January 22, 2020

ಮೊದಲ ಟಿ20ಗೆ ಮಳೆಭೀತಿ: ನಾಳೆ ಭಾರತ-ದಕ್ಷಿಣ ಆಫ್ರಿಕಾ ಫೈಟ್, ಧರ್ಮಶಾಲಾ ಸಜ್ಜು

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಧರ್ಮಶಾಲಾ: ತವರಿನ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಋತುವನ್ನು ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯೊಂದಿಗೆ ಆರಂಭಿಸಲು ಭಾರತ ತಂಡ ಸಜ್ಜಾಗಿದೆ. ನವದೆಹಲಿಯಲ್ಲಿ ಅರುಣ್ ಜೇಟ್ಲಿ ಸ್ಟೇಡಿಯಂ ಮತ್ತು ವಿರಾಟ್ ಕೊಹ್ಲಿ ಸ್ಟಾ್ಯಂಡ್ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಭಾರತ ತಂಡದ ಆಟಗಾರರು ಶುಕ್ರವಾರ ಧರ್ಮಶಾಲಾಗೆ ಆಗಮಿಸಿದ್ದಾರೆ. ಆದರೆ ಪಂದ್ಯಕ್ಕೆ ಮಳೆ ಭೀತಿ ಕಾಡುತ್ತಿದೆ.

ವಿಶ್ವಕಪ್ ನಂತರದಲ್ಲಿ ಸೋಲಿಲ್ಲದೆ ವೆಸ್ಟ್ ಇಂಡೀಸ್ ಪ್ರವಾಸವನ್ನು ಮುಗಿಸಿದ ಭಾರತ ತಂಡ, ಮುಂದಿನ ವರ್ಷದ ಟಿ20 ವಿಶ್ವಕಪ್ ಸಿದ್ಧತೆಯ ಭಾಗವಾಗಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಕ್ವಿಂಟನ್ ಡಿಕಾಕ್ ಸಾರಥ್ಯದಲ್ಲಿ ದಕ್ಷಿಣ ಆಫ್ರಿಕಾ ಹೊಸ ರೀತಿಯ ತಂಡವಾಗಿ ಕಣಕ್ಕಿಳಿಯಲಿದೆ. ಕೆಲ ದಿನಗಳ ಹಿಂದೆಯೇ ಧರ್ಮಶಾಲಾ ತಲುಪಿರುವ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದೆ.

ಕಾಡುತ್ತಿದೆ ಮಳೆಭೀತಿ: ಸ್ಥಳೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಧರ್ಮಶಾಲಾದಲ್ಲಿ ಭಾನುವಾರ ಭಾರಿ ಮಳೆಯಾಗಲಿದೆ. ಇದರಿಂದಾಗಿ ಭಾನುವಾರ ಸಂಜೆ ಪಂದ್ಯ ನಡೆಯುವ ಬಗ್ಗೆಯೇ ಅನುಮಾನಗಳು ಎದ್ದಿವೆ.

ಕಳೆದ ಕೆಲ ದಿನಗಳಿಂದ ಧರ್ಮಶಾಲಾದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದರಿಂದ ಪಿಚ್ ಸಿದ್ಧತೆಗೂ ತೀವ್ರ ಹಿನ್ನಡೆಯಾಗಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗದಂತೆ ಪ್ರಾರ್ಥಿಸಿ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಹವನಗಳನ್ನೂ ನಡೆಸಿದೆ.

ಒಂದು ವೇಳೆ ಪಂದ್ಯ ನಡೆಸಲು ಮಳೆ ಅವಕಾಶ ನೀಡಿದರೆ, ವೇಗಿಗಳಿಗೆ ಪಿಚ್​ನಿಂದ ಸಾಕಷ್ಟು ನೆರವು ಲಭಿಸುವ ನಿರೀಕ್ಷೆ ಇದೆ. ಮಳೆಯಿಂದಾಗಿ ಪಿಚ್​ಅನ್ನು ಕಳೆದ ಕೆಲದಿನಗಳಿಂದ ಹೊದಿಕೆಯಿಂದ ಮುಚ್ಚಿಡಲಾಗಿರುವುದರಿಂದ ಸಾಕಷ್ಟು ತೇವಾಂಶ ದಿಂದ ಕೂಡಿರಲಿದೆ. ಇದು ವೇಗಿಗಳಿಗೆ ಚೆಂಡು ಸ್ವಿಂಗ್ ಮಾಡಲು ಸಹಕಾರಿಯಾಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಟಿ20 ಗೆದ್ದಿಲ್ಲ!

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಇದುವರೆಗೆ ಒಂದೂ ಟಿ20 ಪಂದ್ಯ ಜಯಿಸಿಲ್ಲ! 2015ರಲ್ಲಿ ಕೊನೆಯದಾಗಿ ದಕ್ಷಿಣ ಆಫ್ರಿಕಾ ತವರಿನಲ್ಲಿ ಆಡಿದ್ದ ಟಿ20 ಸರಣಿಯಲ್ಲಿ ಭಾರತ ತಂಡ 0-2ರಿಂದ ಸರಣಿ ಸೋತಿತ್ತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಒಟ್ಟಾರೆ ಟಿ20 ಮುಖಾಮುಖಿ ಇತಿಹಾಸದಲ್ಲಿ ಭಾರತ ತಂಡ ಮೇಲುಗೈ ಹೊಂದಿದೆ. ಭಾರತ ತಂಡ 13 ಟಿ20 ಮುಖಾಮುಖಿಗಳಲ್ಲಿ 8ರಲ್ಲಿ ಜಯಿಸಿದ್ದರೆ, ದಕ್ಷಿಣ ಆಫ್ರಿಕಾ 5ರಲ್ಲಿ ಗೆಲುವು ದಾಖಲಿಸಿದೆ.

ವಿರಾಟ್-ರೋಹಿತ್ ನಡುವೆ ಪೈಪೋಟಿ!

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ನಡುವೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಟಿ20 ಕ್ರಿಕೆಟ್​ನ ಗರಿಷ್ಠ ರನ್ ಸಾಧಕರೆನಿಸಲು ಪೈಪೋಟಿ ಏರ್ಪಡುವ ನಿರೀಕ್ಷೆ ಇದೆ. ಸದ್ಯ ರೋಹಿತ್ ಶರ್ಮ 96 ಪಂದ್ಯಗಳಲ್ಲಿ 2,422 ರನ್ ಗಳಿಸಿ ಟಿ20 ಕ್ರಿಕೆಟ್​ನ ಗರಿಷ್ಠ ರನ್ ಸಾಧಕರೆನಿಸಿದ್ದಾರೆ. ಆದರೆ ವಿರಾಟ್ ಕೊಹ್ಲಿ ಅವರಿಗಿಂತ ಕೇವಲ 53 ರನ್ ಹಿನ್ನಡೆಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 70 ಟಿ20 ಪಂದ್ಯಗಳಲ್ಲಿ 2,369 ರನ್ ಬಾರಿಸಿದ್ದಾರೆ. ಹೀಗಾಗಿ ಇವರಿಬ್ಬರ ನಡುವೆ ಏರ್ಪಡುವ ಈ ಪೈಪೋಟಿ ಭಾರತ ತಂಡಕ್ಕೂ ಭಾರಿ ಲಾಭ ತಂದುಕೊಡುವ ನಿರೀಕ್ಷೆ ಇದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...