More

    ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್​ ಹಸ್ತಾಂತರಕ್ಕೆ ಪಾಕ್​ಗೆ ಮನವಿ ಸಲ್ಲಿಕೆ: ಅರಿಂದಮ್​ ಬಾಗ್ಚಿ

    ನವದೆಹಲಿ: ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಸ್ಥಾಪಕ ಮತ್ತು 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು ಹಸ್ತಾಂತರಿಸುವಂತೆ ಭಾರತ ಸರ್ಕಾರವು ಪಾಕಿಸ್ತಾನಕ್ಕೆ ಮನವಿ ಮಾಡಿದೆ. ಹಸ್ತಾಂತರ ಮನವಿ ಜೊತೆಗೆ ಕೆಲವು ದಾಖಲೆ ಪತ್ರಗಳನ್ನೂ ಸಹ ಇಸ್ಲಾಮಾಬಾದ್‌ಗೆ ಕಳುಹಿಸಲಾಗಿದೆ. ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

    ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪೈಕಿ ಒಬ್ಬನಾದ ಹಫೀಜ್​ ಸಯೀದ್​ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸಿರುವ ಅಮೆರಿಕ, ಅವನ ಬಗ್ಗೆ ಸುಳಿವು ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಿದೆ.

    ಇದನ್ನೂ ಓದಿ: ಬಿಸಿ ಬಿಸಿ ಸೂಪ್​ಗಾಗಿ ನಡೆಯಿತು 300 ಬೆಕ್ಕುಗಳ ಮಾರಣ ಹೋಮ

    ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಆರೋಪದ ಮೇಲೆ ಹಫೀಜ್​ ಸಯೀದ್​ಗೆ ಪಾಕಿಸ್ತಾನ ನ್ಯಾಯಾಲಯವು 33 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಮುಂಬೈ ದಾಳಿಯ ವಿಚಾರಣೆ ಎದುರಿಸಲು ಸಯೀದ್‌ನ ಹಸ್ತಾಂತರಕ್ಕೆ ಭಾರತ ಪದೇಪದೆ ಒತ್ತಾಯಿಸುತ್ತಿದೆ, ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ಹಸ್ತಾಂತರ ಒಪ್ಪಂದದ ಇಲ್ಲದಿರುವುದು ಈ ಪ್ರಕ್ರಿಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ.

    ಭಯೋತ್ಪಾದಕ ಹಫೀಜ್ ಸಯೀದ್ ಬೆಂಬಲಿತ ಪಕ್ಷವು ಪಾಕಿಸ್ತಾನದಲ್ಲಿ ಫೆಬ್ರುವರಿ 8ರಂದು ನಡೆಯಲಿರುವ ನ್ಯಾಷನಲ್ ಅಸೆಂಬ್ಲಿ ಮತ್ತು ಪ್ರಾದೇಶಿಕ ಶಾಸನ ಸಭೆಗಳ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪಾಕಿಸ್ತಾನ ಮರ್ಕಾಜಿ ಮುಸ್ಲಿಂ ಲೀಗ್‌(PMML) ರಾಜಕೀಯ ಪಕ್ಷವನ್ನು ಹಫೀಜ್ ಸಯೀದ್ ಸ್ಥಾಪಿಸಿದ್ದು, ಪಕ್ಷದ ಚಿಹ್ನೆಯಾಗಿ ಕುರ್ಚಿ ನೀಡಲಾಗಿದೆ. ಹಫೀಜ್ ಸಯೀದ್ ಮಗ ತಲ್ಹಾ ಸಯೀದ್, ಲಾಹೋರ್‌ನ ಎನ್‌ಎ–127 ಕ್ಷೇತ್ರದಿಂದ ಸ್ಪರ್ಧಿಸಿದ್ದಾನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts