ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಮ್ಯಾಂಚೆಸ್ಟರ್​: ತೀವ್ರ ಕುತೂಹಲ ಕೆರಳಿದ್ದ ಹೈವೋಲ್ಟೇಜ್​ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ 89 ರನ್​ಗಳಿಂದ ಭರ್ಜರಿ ಜಯಗಳಿಸಿದೆ. ಈ ಮೂಲಕ ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

ಮಳೆಯಿಂದ ಅಡ್ಡಿಯುಂಟಾದ ಪಂದ್ಯದಲ್ಲಿ ಡಕ್ವರ್ಥ್​ ಲೂಯಿಸ್​ ನಿಯಮದ ಪ್ರಕಾರ ಪಾಕಿಸ್ತಾನಕ್ಕೆ 40 ಓವರ್​ಗಳಲ್ಲಿ 302 ರನ್​ ಗಳಿಸುವ ಗುರಿ ನೀಡಲಾಯಿತು. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗುವ ಮುನ್ನ 35 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 166 ರನ್​ ಗಳಿಸಿದ್ದ ಪಾಕಿಸ್ತಾನ ಅಂತಿಮವಾಗಿ 40 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 212 ರನ್​ ಗಳಿಸಿ ಸೋಲನ್ನೊಪ್ಪಿಕೊಂಡಿತು.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ್ದ ಭಾರತ ತಂಡ 50 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 336 ರನ್​ ಗಳಿಸಿತ್ತು. (ಏಜೆನ್ಸೀಸ್​)

One Reply to “ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ”

Leave a Reply

Your email address will not be published. Required fields are marked *