

ಹೈದರಾಬಾದ್: ಚರ್ಮದ ಬಣ್ಣದ ಆಧಾರದ ಮೇಲೆ ನನ್ನ ದೇಶದವರನ್ನು ಅವಮಾನಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಯಾಮ್ ಪಿತ್ರೋಡಾ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ತೆಲಂಗಾಣದ ವಾರಂಗಲ್ನಲ್ಲಿ ಸಾರ್ವಜನಿಕ ಸವಾಮವೇಶವಮನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅಮೆರಿಕದ ಅಂಕಲ್ ಚರ್ಮದ ಆಧಾರದ ಮೇಲೆ ಭಾರತೀಯರನ್ನು ನಿಂದಿಸಿದ್ದು ತಪ್ಪು ಎಂದು ಕಿಡಿಕಾರಿದ್ದಾರೆ.
ದೇಶದ ಪೂರ್ವ ಭಾಗದ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮ ಭಾಗದವರು ಅರಬ್ರಂತೆ, ಉತ್ತರ ಭಾಗದವರು ಬಿಳಿಯರಂತೆ ಹಾಗೂ ದಕ್ಷಿಣ ಭಾರತದ ಜನರು ಆಫ್ರಿಕಾದವರಂತೆ ಕಾಣುತ್ತಾರೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಆಪ್ತ, ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿವಾದದ ಕಿಡಿ ಹೊತ್ತಿಸಿದ್ದರು.
ಕಾಂಗ್ರೆಸ್ನವರು ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ ಅವಮಾನಿಸುತ್ತಿದ್ದಾರೆ. ಕಾಂಗ್ರೆಸ್ನವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕೆ ಅವಮಾನಿಸುತ್ತಿದ್ದಾರೆ ಎಂದು ಈಗ ನನಗೆ ಅರ್ಥವಾಗುತ್ತಿದೆ. ಆದಿವಾಸಿ ಕುಟುಂಬದ ಮಗಳಾಗಿರುವ ದ್ರೌಪದಿ ಮುರ್ಮು ಅವರನ್ನು ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸುತ್ತಿದೆ ಎಂದು ನಾನು ತುಂಬಾ ಯೋಚಿಸುತ್ತಿದ್ದೆ ಆದರೆ ಇಂದು ನನಗೆ ಕಾರಣ ತಿಳಿಯಿತು ಎಂದಿದ್ದಾರೆ.
ಯಾರಾದರೂ ನನ್ನನ್ನು ನಿಂದಿಸಿದರೆ, ನಾನು ಅದನ್ನು ಸಹಿಸಿಕೊಳ್ಳಬಲ್ಲೆ, ಆದರೆ ಜನರನ್ನು ಚರ್ಮದ ಆಧಾರದಲ್ಲಿ ನಿಂತಿಸಿದರೆ ನಾನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ತೆಲಂಗಾಣದ ವಾರಂಗಲ್ನಲ್ಲಿ ಸ್ಯಾಮ್ ಪಿತ್ರೋಡಾ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.