ದೋಡಾ ಎನ್​ಕೌಂಟರ್​​; ಸೇನಾ ಕ್ಯಾಪ್ಟನ್​​ ಹುತಾತ್ಮ.. ನಾಲ್ವರು ಉಗ್ರರು ಹತ

Untitled-design-2024-08-14T135001.002
Published on

ಶ್ರೀನಗರ: ಜಮ್ಮುಮತ್ತುಕಾಶ್ವೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಭಾರತೀಯ ಸೇನೆಯ 48 ರಾಷ್ಟ್ರೀಯ ರೈಫಲ್ಸ್​​ನ ಕ್ಯಾಪ್ಟನ್​​​​ ದೋಡಾದ ಅಸ್ಸಾರ್‌ನಲ್ಲಿರುವ ಶಿವಗಢ್​​ ಧಾರ್​​ನಲ್ಲಿ ಉಸ್ತುವಾರಿ ವಹಿಸಿದ್ದರು ಎಂದು ಭಾರತೀಯ ಸೇನೆ ಖಚಿತಪಡಿಸಿದೆ. ಎನ್​ಕೌಂಟರ್​ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ಶಿವಗಢ್-ಅಸ್ಸಾರ್ ಬೆಲ್ಟ್‌ನಲ್ಲಿ ಅಡಗಿರುವ ವಿದೇಶಿ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಂಗಳವಾರ(ಆಗಸ್ಟ್​​ 13) ಉಧಂಪುರದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಎನ್​ಕೌಂಟರ್​​​ ಬುಧವಾರವು ಮುಂದುವರಿದಿದೆ.

ಭಯೋತ್ಪಾದಕರು ಅರಣ್ಯದ ನದಿಯ ಬಳಿಕ ಅಡಗಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದರು. ಬುಧವಾರ ಬೆಳಗ್ಗೆ ಎನ್​ಕೌಂಟರ್​​ ಆರಂಭವಾದ ಸಮಯದಲ್ಲಿ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರಿದ್ದ ಸ್ಥಳದಲ್ಲಿ ಅಮೆರಿಕದ ಎಂ-4ರೈಫಲ್​​​ ಮತ್ತು ಮೂರು ಬ್ಯಾಗ್​ ಸ್ಫೋಟಕಗಳು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದಕ್ಕೂ ಮುನ್ನ ಆಗಸ್ಟ್​​​​ 10ರಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಹಾಗೂ ಓರ್ವ ನಾಗರಿಕ ಮೃತಪಟ್ಟಿದ್ದರು. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಈ ಎನ್​ಕೌಂಟರ್​ ನಡೆಸಿತ್ತು. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net