ಜಮ್ಮು ಕಾಶ್ಮೀರ ಗಡಿಯಲ್ಲಿ ಒಳನುಸುಳುವಿಕೆ ಯತ್ನ: ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು Terrorists Neutralised

Military
Published on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು (Terrorists Neutralised)ಭದ್ರತಾ ಪಡೆಗಳು ಮಂಗಳವಾರ (ಅ.14) ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭಾರತೀಯ ಸೇನಾ ಪಡೆಗಳು ಎಲ್​ಒಸಿಯಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಕಂಡ ನಂತರ, ಸೇನೆಯು ಶೋಧ ಕಾರ್ಯವನ್ನು ಮುಂದುವರೆಸಿದ್ದು, ಈ ವೇಳೆ ಭಯೋತ್ಪಾದಕರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಚಳಿಗಾಲ ಆರಂಭವಾಗುವ ಮೊದಲು ಪಾಕ್​ ಆಕ್ರಮಿತ ಕಾಶ್ಮೀರ ಭಾಗಕ್ಕೆ ಒಳನುಸುಳುವಿಕೆಯು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಏಕೆಂದರೆ ಈ ಸಮಯದಲ್ಲಿ ಪರ್ವತ ಮಾರ್ಗಗಳು ಮುಚ್ಚಲ್ಪಡುತ್ತವೆ. ಆದರಿಂದ ಪಡೆಗಳ ಜಾಗರೂಕತೆಯಿಂದ ಇರಬೇಕು ಎಂದು ಎಂದು ಹಿರಿಯ ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇದೇ ವರ್ಷದ ಸೆಪ್ಟೆಂಬರ್​ನಲ್ಲಿ ಕುಪ್ವಾರಾ ಜಿಲ್ಲೆಯ ಕೇರನ್ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿತ್ತು.

ರಾಜೌರಿಯಲ್ಲಿ ದಾಳಿ

ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ಪ್ರದೇಶದಲ್ಲಿ ಶಂಕಿತ ವ್ಯಕ್ತಿಗಳ ಚಲನವಲನಗಳ ಬಗ್ಗೆ ಮಾಹಿತಿ ಪಡೆದ ನಂತರ, ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಈ ವೇಳೆ ಭಯೋತ್ಪಾದಕರು ಸೇನೆಯ ಮೇಲೆ ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ ನಡೆಸಲಾಯಿತು ಎಂದು ವರದಿ ಬಂದಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net