More

  ರಜೆಗೆ ಬಂದಿದ್ದ ಯೋಧನ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಹೈಕೋರ್ಟ್​ ಮೆಟ್ಟಿಲೇರಿತು ಪ್ರಕರಣ

  ಚಂಡೀಗಢ: ದೇಶದ ಜನರು ಎಂಥಹ ಪರಿಸ್ಥಿತಿಯಲ್ಲೂ ತಮ್ಮ ಮನೆಗಳಲ್ಲಿ ಸುರಕ್ಷಿತವಾಗಿರುತ್ತಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ನಮ್ಮ ಯೋಧರು. ಆದರೆ ಇಂತಹ ನಿಸ್ವಾರ್ಥ ಸೇವೆ ಸಲ್ಲಿಸುವ ಯೋಧನೊಬ್ಬನ ಮೇಲೆಯೇ ಹಲ್ಲೆ ಮಾಡಿ ವಿವಸ್ತ್ರಗೊಳಿಸಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

  ಘಟನೆಯೂ ಚಂಡೀಗಢದಲ್ಲಿ ನಡೆದಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಯೋಧ ಪೊಲೀಸರ ವಿರುದ್ಧ ದೂರು ದಾಖಲಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹ ಕೇಳಿ ಬರುತ್ತಿದೆ.

  10 ಕಾರ್ಪ್ಸ್ ಸಿಗ್ನಲ್ ರೆಜಿಮೆಂಟ್‌ಗೆ ಸೇರಿದ ನಾಯ್ಕ್​ ಅರವಿಂದರ್​ ಸಿಂಗ್​ ಹಲ್ಲೆಗೊಳಗಾದ ಯೋಧ ಎಂದು ತಿಳಿದು ಬಂದಿದೆ. ಕಳೆದ ವರ್ಷ ದೀಪಾವಳಿ ರಜೆಗೆಂದು ತಮ್ಮ ಮನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದ್ದು, ಪೊಲೀಸರು ಅರವಿಂದರ್​ ಅವರನ್ನು ಕಾರಣವಿಲ್ಲದೆ ಬಂಧಿಸಿ ವಿವಸ್ತ್ರಗೊಳಿಸಿ ತಮ್ಮ ಪೇಟವನ್ನು ಕಿತ್ತೆಸೆದಿದ್ದಾರೆ. ಇದಲ್ಲದೆ ಕಾಲಿ ಹಾಳೆ ಮೇಲೆ ಸಹಿ ಮಾಡಿಸಿಕೊಂಡೊಇದ್ದಾರೆ ಎಂದು ಆರೋಪಿಸಿದ್ದಾರೆ.

  ಇದನ್ನೂ ಓದಿ: ಮನಮೋಹನ್ ಸಿಂಗ್ ವ್ಹೀಲ್‌ ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ಚೆನ್ನಾಗಿ ನೆನಪಿದೆ: ಪ್ರಧಾನಿ ಮೋದಿ

  ಅರವಿಂದರ್​ ಅವರ ಪತ್ನಿ ಚಂಡೀಗಢ ಪೊಲೀಸ್​ ಇಲಾಖೆಯಲ್ಲಿ ಕಾನ್ಸ್​ಟೇಬಲ್​ ಆಗಿ ಕಾರ್ಯನಿರ್ವಹಿಸುತ್ತಿದ್ದು, ಆಕೆ ಕೆಲಸ ಮಾಡುವ ಪೊಲೀಸ್​ ಠಾಣೆಯಲ್ಲೇ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಕೌಟುಂಬಿಕ ಕಲಹದ ಹಿನ್ನಲೆ ಈ ರೀತಿ ಮಾಡಿದ್ದಾಗಿ ಅಧಿಕಾರಿಗಳು ತಡನಂತರ ಹೇಳಿದ್ದಾರೆ. ಆದರೆ, ನನ್ನಿಂದ ಯಾವುದೇ ರೀತಿಯ ತಪ್ಪಾಗಿಲ್ಲ. ಈ ಸಂಬಂಧ ನಾನು ಪಂಜಾಬ್​-ಹರಿಯಾಣ ಹೈಕೋರ್ಟಿನಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.


  ನವೆಂಬರ್ 12 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪೊಲೀಸ್ ಠಾಣೆಯೊಳಗೆ ಘಟನೆ ನಡೆದ ದಿನದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸುವಂತೆ ಸೆಕ್ಟರ್ ಪೊಲೀಸ್ ಠಾಣಾಧಿಕಾರಿಗಳಿಗೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 21ರಂದು ನಡೆಸಲಾಗುವುದು ಎಂದು ಹೇಳಿ ಅರ್ಜಿಯನ್ನು ಮುಂದೂಡಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts