25.9 C
Bengaluru
Wednesday, January 22, 2020

ಬ್ರಿಟನ್ ಚುನಾವಣೆಯಲ್ಲಿ ಭಾರತೀಯ ಸಂಜಾತ ಸಂಸದರ ಹವಾ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಲಂಡನ್: ಬ್ರಿಟನ್ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಭಾರತೀಯ ಸಮುದಾಯದ ಹಲವು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕನ್ಸರ್ವೇಟಿವ್ ಮತ್ತು ಲೇಬರ್​ ಪಾರ್ಟಿಗಳಿಂದ ಚುನಾವಣೆಗೆ ನಿಂತಿದ್ದ ಡಜನ್​ಗೂ ಅಧಿಕ ಭಾರತೀಯರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿದ ಪ್ರಮುಖ ಅಭ್ಯರ್ಥಿಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

1. ಕ್ಲಾಯ್ರ್ ಕುಟಿನ್ಹೋ
ಕನ್ಸರ್ವೇಟಿವ್ ಪಕ್ಷದಿಂದ ಕ್ಲಾಯ್ರ್ ಕುಟಿನ್ಹೋ ಸರ್ರೇ ಈಸ್ಟ್​​ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಕ್ಷೇತದಲ್ಲಿ 35,624 ಮತದಾರರಿದ್ದು, ಲೇಬರ್ ಪಕ್ಷದ ಪ್ರತ್ಯರ್ಥಿ ವಿರುದ್ಧ 24,040 ಮತಗಳ ಅಂತರದ ಭರ್ಜರಿ ಜಯ ದಾಖಲಿಸಿದ್ದಾರೆ.

2.ಗಗನ್ ಮೋಹಿಂದ್ರಾ
ಹರ್ಟ್‌ಫೋರ್ಡ್‌ಶೈರ್​ನ ನೈಋತ್ಯ ಕ್ಷೇತ್ರದಲ್ಲಿ ಕನ್ಸರ್ವೇಟಿವ್ ಪಕ್ಷದಿಂದ ಸ್ಪರ್ಧಿಸಿದ್ದರು. 30,327 ಮತದಾರರಿರುವ ಈ ಕ್ಷೇತದಲ್ಲಿ ಪ್ರತಿಸ್ಪರ್ಧಿ ವಿರುದ್ಧ 14,408 ಮತಗಳ ಅಂತರದಿಂದ ಜಯಗಳಿಸಿದ್ದಾರೆ.


3. ಪ್ರೀತಿ ಪಟೇಲ್
ಬ್ರಿಟನ್ ಗೃಹ ಕಾರ್ಯದರ್ಶಿಯಾಗಿದ್ದ ಪ್ರೀತಿ ಪಟೇಲ್ ವಿಟ್​​ಹ್ಯಾಮ್ ಕ್ಷೇತದಲ್ಲಿ ಪ್ರತ್ಯರ್ಥಿ ವಿರುದ್ಧ 24,082 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಪ್ರಭಾವಿಯಾಗಿರುವ ಪ್ರೀತಿ ಪಟೇಲ್ ಬೋರಿಸ್​ ಜಾನ್ಸನ್ ಸರ್ಕಾರದಲ್ಲಿ ಮತ್ತೊಮ್ಮೆ ಪ್ರಮುಖ ಹುದ್ದೆ ಅಲಂಕರಿಸಲಿದ್ದಾರೆ.

4.ರಿಷಿ ಸುನಕ್
ಇನ್ಫೋಸಿಸ್​​ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯನಾದ ರಿಷಿ ಸುನಕ್, ರೀಡಿಂಗ್ ವೆಸ್ಟ್ ಕ್ಷೇತದಲ್ಲಿ ಭಾರತೀಯ ಮೂಲದ ಪ್ರತ್ಯರ್ಥಿ ಅಲೋಕ್ ಶರ್ಮಾ ವಿರುದ್ಧ 24,393 ಮತಗಳ ಅಂತರದ ಭರ್ಜರಿ ಜಯ ದಾಖಲಿಸಿದ್ದಾರೆ. ಕಳೆದ ಸರ್ಕಾದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದ ರಿಷಿ, ಜಾನ್ಸನ್ ಸಂಪುಟದಲ್ಲಿ ಪ್ರಭಾವಿ ಖಾತೆ ಹೊಂದಲಿದ್ದಾರೆ.

5.ಶೈಲೇಶ್ ವರ್ಮಾ
ವಾಯುವ್ಯ ಕೇಂಬ್ರಿಡ್ಜ್‌ಶೈರ್ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಶೈಲೇಶ್ ಶರ್ಮಾ, 25,983 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

6.ನವೇಂದ್ರು ಮಿಶ್ರಾ
ಲೇಬರ್ ಪಕ್ಷದಿಂದ ಸ್ಟಾಕ್ಪೋರ್ಟ್​ ಕ್ಷೇತ್ರದಿಂದ ಸ್ಪರ್ಧಿಸಿದ್ದ ನವೇಂದ್ರು ಮಿಶ್ರಾ, 21,6​95 ಮತಗಳ ಅಂತರದ ಜಯ ದಾಖಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಸಂಸದರಾಗಿ ಬ್ರಿಟನ್ ಪಾರ್ಲಿಮೆಂಟ್​​ಗೆ ಪ್ರವೇಶ ಪಡೆದಿದ್ದಾರೆ.

7.ಪ್ರೀತ್ ಕೌರ್ ಗಿಲ್
ಕಳೆದ ಚುನಾವಣೆಯಲ್ಲಿ ಜಯಗಳಿಸಿ ಬ್ರಿಟನ್ ಸಂಸತ್​ ಪ್ರವೇಶಿಸಿದ ಮೊದಲ ಸಿಖ್ ಮಹಿಳೆ ಎಂದು ಇತಿಹಾಸ ನಿರ್ಮಿಸಿದ್ದ ಪ್ರೀತ್ ಕೌರ್ ಗಿಲ್ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬರ್ಮಿಂಗ್​​ಹ್ಯಾಮ್ ಎಡ್ಜ್​​ಬಾಸ್ಟನ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗಿಲ್, 21, 217 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

8.ತನ್ಮ್​​ಜೀತ್ ಸಿಂಗ್ ದೇಶಿ
ಆಗ್ನೇಯ ಇಂಗ್ಲೆಂಡ್​​ನ ಸ್ಲಗ್ ಕ್ಷೇತ್ರವನ್ನು ಉಳಿಸಿಕೊಂಡಿರುವ ತನ್ಮ್​​​ಜೀತ್ ಸಿಂಗ್, ಭಾರತೀಯ ಮೂಲದ ಕನ್ವಲ್ ತೂರ್ ಗಿಲ್ ವಿರುದ್ಧ 29,421 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

9.ವಿರೇಂದ್ರ ಶರ್ಮಾ
ಸ್ವ ಪಕ್ಷದಲ್ಲೇ ತೀವ್ರ ವಿರೋಧವನ್ನು ಎದುರಿಸುತ್ತಿದ್ದ ಮಾಜಿ ಸಂಸದ ವಿರೇಂದ್ರ ಶರ್ಮಾ, ಎಲ್ಲಿಂಗ್ಟನ್ ಸೌತ್ ಹಾಲ್ ಕ್ಷೇತದಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. 25,678 ಮತಗಳ ಅಂತರದಿಂದ ಪ್ರತ್ಯರ್ಥಿ ವಿರುದ್ಧ ಜಯ ದಾಖಲಿಸಿದ್ದಾರೆ.

10.ಸೀಮಾ ಮಲ್ಹೋತ್ರಾ
ಫೆಲ್ಥಮ್ ಮತ್ತು ಹೆಸ್ಟನ್ ಕ್ಷೇತ್ರದಿಂದ ಕಣಕ್ಕಿಳಿಸಿದ್ದ ಮಲ್ಹೋತ್ರಾ 24,876 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

11. ವೆಲೆರಿ ವಾಜ್
ಚುನಾವಣೆಗೂ ಮುನ್ನ ಹಗರಣದಲ್ಲಿ ಸಿಲುಕಿ ಸಂಸದ ಸ್ಥಾನ ತ್ಯಜಿಸಿದ್ದ ಕೀತ್ ವಾಜ್ ಸಹೋದರಿ ವೆಲೆರಿ ವಾಜ್, ವಾಲ್ಸಾಲ್ ದಕ್ಷಿಣ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದರು. ವೆಲೆರಿಗೆ ಜಯ ಕಷ್ಟ ಎಂದು ಚುನಾವಣೆ ಸಂದರ್ಭದಲ್ಲಿ ಭಾವಿಸಲಾಗಿತ್ತು. ಆದರೆ ಎಲ್ಲರೂ ಅಚ್ಚರಿಗೊಳಗಾಗುವಂತೆ 20,872 ಮತಗಳ ಅಂತರದಿಂದ ಭಾರತೀಯ ಮೂಲದ ಗುರ್ಜಿತ್ ಬೈನ್ಸ್​ ವಿರುದ್ಧ ಜಯಗಳಿಸಿದ್ದಾರೆ.

ಬ್ರಿಟನ್​ನಲ್ಲಿ ಭಾರತೀಯ ಸಮುದಾಯ ಬಲಿಷ್ಠವಾಗಿದ್ದು, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದೆ. ಲೇಬರ್ ಪಕ್ಷ ಚುನಾವಣೆಯಲ್ಲಿ ದಯನೀಯ ಸೋಲು ಕಂಡರೂ ಆ ಪಕ್ಷದಿಂದ ಸ್ಪರ್ಧಿಸಿದ್ದ ಭಾರತೀಯ ಮೂಲದವರು ಜಯಗಳಿಸಿದ್ದಾರೆ. ಅಧಿಕಾರ ಪಕ್ಷದಲ್ಲಿ ಭಾರತೀಯ ಸಂಜಾತರು ಅಧಿಕ ಪ್ರಮಾಣದಲ್ಲಿದ್ದು, ಬ್ರಿಟನ್ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಸಮುದಾಯವಾಗಿ ಗುರುತಿಸಿಕೊಂಡಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...